ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದ ಬಿಡುಗಡೆ ದಿನಾಂಕ ಅನಿವಾರ್ಯ ಕಾರಣಗಳಿಂದಾಗಿ ಮುಂದೂಡುತ್ತಲೆ ಬರಲಾಗಿತ್ತು. ಆದರೆ ಇದೀಗ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದ ಬಿಡುಗಡೆ ದಿನಾಂಕ ಅನಿವಾರ್ಯ ಕಾರಣಗಳಿಂದಾಗಿ ಮುಂದೂಡುತ್ತಲೆ ಬರಲಾಗಿತ್ತು. ಆದರೆ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕ ಮುನಿರತ್ನ ಫೈನಲ್ ಮಾಡಲಿದ್ದಾರೆ.
ಈ ವಾರದ ಕೊನೆಯಲ್ಲಿ ಮನಿರತ್ನ ಅವರು ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ದರ್ಶನ್ ಅವರ 50ನೇ ಚಿತ್ರವಾಗಿ ಎಂದೇ ಬಿಂಬಿಸಲಾಗಿರುವ ಕುರುಕ್ಷೇತ್ರದ ಮೇಲೆ ಅಭಿಮಾನಿಗಳ ಕಾತುರ ಜೋರಾಗಿದೆ. 
ನಾಗಣ್ಣ ನಿರ್ದೇಶನದ ಚಿತ್ರ 2ಡಿ ಮತ್ತು 3ಡಿಯಲ್ಲಿ ಬಿಡುಗಡೆಯಾಗಲಿದೆ. ಜೂನ್ ಕೊನೆಯ ವಾರದಲ್ಲಿ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದ್ದು ಜೂನ್ ಮೊದಲ ವಾರದಲ್ಲಿ ಅದ್ಧೂರಿಯಾಗಿ ಆಡಿಯೋ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ.
ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಕುರುಕ್ಷೇತ್ರ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಇನ್ನು ಪೌರಾಣಿಕ ಚಿತ್ರವಾಗಿರುವುದರಿಂದ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಚಿತ್ರದಲ್ಲಿ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್, ರವಿಶಂಕರ್ ಮತ್ತು ಸೋನು ಸೂದ್ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!