ನಾಮಕರಣ ಕಾರ್ಯಕ್ರಮ 
ಸಿನಿಮಾ ಸುದ್ದಿ

ಶ್ರುತಿ ಹರಿಹರನ್ ಪುತ್ರಿಗೆ ನಾಮಕರಣ: ಮಗಳು ಜಾನಕಿ ಫೋಟೊ ಪೋಸ್ಟ್ ಮಾಡಿದ ರಾಮ್

ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.

ಶ್ರುತಿ ತಮ್ಮ ಮಗಳ ನಾಮಕರಣವನ್ನು ಸಾಂಪ್ರದಾಯಿಕವಾಗಿ ಕುಟುಂಬಸ್ಥರ ಜೊತೆ ಮಾಡಿದ್ದಾರೆ. ರಾಮ್ ಈ ಕಾರ್ಯಕ್ರಮದಲ್ಲಿ ತಮ್ಮ ಮಗಳನ್ನು ಎತ್ತಿಕೊಂಡು ಶ್ರುತಿ ಹಾಗೂ ಕುಟುಂಬಸ್ಥರ ಜೊತೆ ಕುಳಿತಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ನಾವು ಅತ್ಯುತ್ತಮ ಉಡುಗೊರೆಯೊಂದನ್ನು ಸ್ವೀಕರಿಸಿ ೨೮ ದಿನಗಳು ಕಳೆದಿವೆ ಮತ್ತು ಅದು ಕುಟುಂಬದ ಪ್ರೀತಿ ಪಾತ್ರರ ಜೊತೆ ಸಂಭ್ರಮಾಚರಣೆಗೆ ಕರೆ ನೀಡುತ್ತದೆ ಅಲ್ಲವೇ? ಎಂದು ಬರೆದುಕೊಂಡಿದ್ದಾರೆ.

ಸೋಮವಾರ ನಾಮಕರಣ ಕಾರ್ಯಕ್ರಮ ನಡೆದಿದ್ದು, ಶ್ರುತಿ ಹಾಗೂ ರಾಮ್ ತಮ್ಮ ಮಗಳಿಗೆ ‘ಜಾನಕಿ’ ಎಂದು ಹೆಸರಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ಸಾಂಪ್ರದಾಯಿಕವಾಗಿ ಈ ಕಾರ್ಯಕ್ರಮ ನಡೆದಿದೆ.

ಶ್ರುತಿ ಈವರೆಗೂ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿಲ್ಲ. ಆದರೆ ಈಗ ರಾಮ್ ಪೋಸ್ಟ್ ಮಾಡಿದ ಫೋಟೋದಲ್ಲೂ ಮಗುವಿನ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಅಭಿಮಾನಿಗಳು ಮಗಳ ಫೋಟೋ ರಿವೀಲ್ ಮಾಡಿ ಎಂದು ಶ್ರುತಿ ಬಳಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT