ರಮ್ಯಾ 
ಸಿನಿಮಾ ಸುದ್ದಿ

ರಾಜಕೀಯದಿಂದ ದೂರ ಉಳಿದು, ಮತ್ತೆ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ

ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಇದೀಗ ಮತ್ತೆ ಬೆಳ್ಳಿತೆರೆಗೆ ರೀಎಂಟ್ರಿ ಕೊಡುತ್ತಿದ್ದಾರೆ. 

ಬೆಂಗಳೂರು: ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಇದೀಗ ಮತ್ತೆ ಬೆಳ್ಳಿತೆರೆಗೆ ರೀಎಂಟ್ರಿ ಕೊಡುತ್ತಿದ್ದಾರೆ. 

ದಿಲ್ ಕಾ ರಾಜಾ ಚಿತ್ರದ ಮೂಲಕ ಮೋಹಕ ತಾರೆ ರಮ್ಯಾ ಅವರು ಸ್ಯಾಂಡಲ್'ವುಡ್'ಗೆ ರೀ ಎಂಟ್ರಿ ಕೊಡುತ್ತಿದ್ದಾರೆ. 

ನಟ ಪುನೀತ್ ರಾಜ್ ಕುಮಾರ್ ಅಭಿನಯದ ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದ ರಮ್ಯಾ ಅವರು ನಂತರದ ದಿನಗಳಲ್ಲಿ ಮೋಹಕ ತಾರೆ, ಸ್ಯಾಂಡಲ್'ವುಡ್ ಕ್ವೀನ್ ಎಂದೇ ಖ್ಯಾತಿ ಪಡೆದಿದ್ದರು. ಆದರೆ, ಸಿನಿಮಾಮರಂಗದಿಂದ ದೂರ ಸರಿದು ಹಲವು ವರ್ಷಗಳು ಕಳದೆದಿದ್ದವು. ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಿದ್ದರು. 

ಇದರ ನಡುವೆಯೇ ಕೊನೆಯದಾಗಿ ನಾಗರಹಾವು ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇದಾದ ಬಳಿಕ ಎಲ್ಲಿಯೂ ತೆರೆ ಮೇಲೆ ಕಾಣಿಸಿಕೊಂಡಿರಲಿಲ್ಲ. ಇದೀಗ ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ರಮ್ಯಾ ಅವರು, ದಿಲ್ ಕಾ ರಾಜ ಸಿನಿಮಾ ಮೂಲಕ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. 

ಇತ್ತೀಚೆಗಷ್ಟೇ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ರಮ್ಯಾ ಅವರು ಅಭಿನಯಿಸಿರುವುದು ಕಂಡು ಬಂದಿದೆ. ಈ ಮೂಲಕ ಸುಮಾರು 5 ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಮೋಹಕ ತಾರೆ ಬಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT