ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

'ಗಂಟುಮೂಟೆ' ನೋಡಿ ರಕ್ಷಿತ್ ಶೆಟ್ಟಿ ಹೀಗ್ ಹೇಳಿದ್ರಾ..!

ಹೊಸಬರ ವಿನೂತನ ಪ್ರಯತ್ನ ಗಂಟೂಮೂಟೆ ಚಿತ್ರದ ಕುರಿತಂತೆ ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು: ಹೊಸಬರ ವಿನೂತನ ಪ್ರಯತ್ನ ಗಂಟೂಮೂಟೆ ಚಿತ್ರದ ಕುರಿತಂತೆ ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರೂಪಾ ರಾವ್ ನಿರ್ದೇಶನದ ಚೊಚ್ಚಲ ಚಿತ್ರವಾದ ಗಂಟುಮೂಟೆ ಚಿತ್ರ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಚಿತ್ರಕ್ಕೆ ಸಂಬಂಧಿಸಿದಂತೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇತ್ತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕೂಡ ಚಿತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

'ಗಂಟುಮೂಟೆ ಅತ್ಯಂತ ವಿರಳ ಕಥಾ ಹಂದರದ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡಿರುವ ಚಿತ್ರ. ಇದು ನಮಗೆ ಅಪರಿಚಿತ ಎನ್ನಬಹುದಾದ ಜಗತ್ತನ್ನ ನಮ್ಮೆದುರು ಬಿಚ್ಚಿಡುವ ಪರಿಯೇ ಅಚ್ಚರಿಯಂಥಾದ್ದು. ಗಂಟುಮೂಟೆ ಅಭಿವ್ಯಕ್ತಗೊಳಿಸಲು ಅಸಾಧ್ಯವಾದಂಥಾ ಅಂಶಗಳ ಮೂಲಕ ಅದ್ಭುತ ಕವಿತೆಯಂತೆಯೇ ರೂಪುಗೊಂಡಿದೆ. ಇದರೊಳಗಿನ ಪ್ರತೀ ಪಾತ್ರಗಳೂ ಅದ್ಭುತ ಲೋಕದೊಳಗೆ ಕರೆದೊಯ್ಯುತ್ತದೆ. ಇದು ನೀವೆಲ್ಲ ನೋಡಲೇ ಬೇಕಾದ ಚಿತ್ರ' ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ರಕ್ಷಿತ್ ತಮ್ಮ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಬಿಸಿಯಾಗಿದ್ದು, ಅದರ ನಡುವೆಯೂ ಈ ಚಿತ್ರವನ್ನು ನೋಡಿ ಖುಷಿಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT