ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಆಯುಷ್ಮಾನ್‌ಭವ' ಬಿಡುಗಡೆ ಮುಂದೂಡಿಕೆ, ಸೆಂಚುರಿ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ

ಇದು ನಿಜಕ್ಕೂ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯಾಗಿದ್ದು, 'ಆಯುಷ್ಮಾನ್‌ಭವ' ಚಿತ್ರ ಬಿಡುಗಡೆ ಮುಂದೂಡಲಾಗಿದೆ ಎಂದು ಚಿತ್ರತಂಡ ಮಂಗಳವಾರ ತಿಳಿಸಿದೆ.

ಬೆಂಗಳೂರು: ಇದು ನಿಜಕ್ಕೂ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯಾಗಿದ್ದು, 'ಆಯುಷ್ಮಾನ್‌ಭವ' ಚಿತ್ರ ಬಿಡುಗಡೆ ಮುಂದೂಡಲಾಗಿದೆ ಎಂದು ಚಿತ್ರತಂಡ ಮಂಗಳವಾರ ತಿಳಿಸಿದೆ.

'ಆಯುಷ್ಮಾನ್‌ಭವ' ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಈ ಮೊದಲು ಹೇಳಲಾಗಿತ್ತು.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ ಎಸ್ ದ್ವಾರಕೀಶ್ ಹಾಗೂ ಯೋಗೀಶ್ ದ್ವಾರಕೀಶ್ ಅವರು ಈ ಚಿತ್ರ ನಿರ್ಮಿಸಿದ್ದಾರೆ

ದ್ವಾರಕೀಶ್ ಚಿತ್ರ ಸಂಸ್ಥೆಗೆ ೫೦ ವರ್ಷ ತುಂಬಿದ್ದು, ಆ ಸಂಸ್ಥೆಯಿಂದ ನಿರ್ಮಾಣವಾಗಿರುವ ೫೨ನೇ ಚಿತ್ರ 'ಆಯುಷ್ಮಾನ್ ಭವ'.

ಪಿ.ವಾಸು ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರು, ಗೌರಿಬಿದನೂರು, ಅಲೇಪಿ, ಚಾಲ್‌ಕುಡಿ, ಮಂಗಳೂರು, ಮಡಿಕೇರಿ, ಹೈದರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಇದು ಗುರುಕಿರಣ್ ಸಂಗೀತ ನಿರ್ದೇಶನದ ೧೦೦ನೇ ಚಿತ್ರ ಎಂಬುದು ವಿಶೇಷ.

ಪಿ.ಕೆ.ಎಚ್.ದಾಸ್ ಛಾಯಾಗ್ರಹಣ, ಗೌತಮ್‌ರಾಜು ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಎ. ಹರ್ಷ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಶಿವರಾಜಕುಮಾರ್, ಅನಂತನಾಗ್, ರಚಿತಾರಾಮ್, ನಿಧಿಸುಬ್ಬಯ್ಯ, ಸುಹಾಸಿನಿ, ಶಿವಾಜಿಪ್ರಭು, ಸಾಧುಕೋಕಿಲ, ರಂಗಾಯಣ ರಘು, ಯಶ್ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

SCROLL FOR NEXT