ರಾಜ್ ಕುಮಾರ್ - ಅನಿಲ್ ಕಪೂರ್ 
ಸಿನಿಮಾ ಸುದ್ದಿ

ಡಾ. ರಾಜ್ ಕುಮಾರ್ ಎಲ್ಲ ನಟರ ಚಕ್ರವರ್ತಿ: ಅನಿಲ್ ಕಪೂರ್

ಡಾ. ರಾಜ್ ಕುಮಾರ್ ಅವರ ಹೆಸರನ್ನು ಕೇಳದವರಿಲ್ಲ. ಅವರನ್ನು ಯಾರೂ ಮರೆಯುವುದೂ ಇಲ್ಲ. ಅವರ ವ್ಯಕ್ತಿತ್ವವೇ ಅಂತಹುದು ಎಂದು ಬಾಲಿವುಡ್ ಖ್ಯಾತ ನಟ ಅನಿಲ್ ಕಪೂರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಡಾ. ರಾಜ್ ಕುಮಾರ್ ಅವರ ಹೆಸರನ್ನು ಕೇಳದವರಿಲ್ಲ. ಅವರನ್ನು ಯಾರೂ ಮರೆಯುವುದೂ ಇಲ್ಲ. ಅವರ ವ್ಯಕ್ತಿತ್ವವೇ ಅಂತಹುದು ಎಂದು ಬಾಲಿವುಡ್ ಖ್ಯಾತ ನಟ ಅನಿಲ್ ಕಪೂರ್ ಅವರು ಗುರುವಾರ ಹೇಳಿದ್ದಾರೆ.

ಇಂದು ಬಸವನಗುಡಿಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಅನಿಲ್ ಕಪೂರ್, ಕನ್ನಡ ಚಿತ್ರರಂಗ ಕಂಡ ಮೇರು ನಟ ಡಾ. ರಾಜ್ ಕುಮಾರ್ ಅವರನ್ನು ಹಾಡಿಹೊಗಳಿದ್ದಾರೆ.

ರಾಜ್ ಕುಮಾರ್ ಅವರು ಕೇವಲ ರಾಜ್ ಕುಮಾರ್ ಅಲ್ಲ ಅವರು ಚಕ್ರವರ್ತಿ ರಾಜ್ ಕುಮಾರ್, ಭಾರತೀಯ ಚಿತ್ರರಂಗದ ಎಲ್ಲಾ ನಟರಿಗೆ ಅವರು ಚಕ್ರವರ್ತಿ ಎಂದು ಹೇಳಿದ್ದಾರೆ. ಅವರು ಕೇವಲ ಕನ್ನಡ ಸಿನಿಮಾ ಜಗತ್ತಿಗೆ ಮಾತ್ರ ಸಿಮೀತ ಅಲ್ಲ ಅವರು ಇಡೀ ಭಾರತೀಯ ಚಿತ್ರರಂಗಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೊಗಳಿದರು.

“ಡಾ ರಾಜ್ ಕುಮಾರ್ ಎಲ್ಲ ನಟರುಗಳ ಚಕ್ರವರ್ತಿಯಿದ್ದಂತೆ ಭಾರತೀಯ ಚಲನಚಿತ್ರ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರ ಕೇವಲ ಚಿತ್ರರಂಗ, ಚಿತ್ರರಸಿಕರು ಮಾತ್ರವಲ್ಲದೆ ಪ್ರತಿಯೊಬ್ಬರೂ ಪ್ರೀತಿಸುವ ವ್ಯಕ್ತಿತ್ವವನ್ನು ಹೊಂದಿದ್ದರು ಅವರು ಸದಾ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ” ಎಂದು ಅನಿಲ್ ಕಪೂರ್ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel