ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ 
ಸಿನಿಮಾ ಸುದ್ದಿ

ಕರ್ಮ, ಪ್ರತೀಕಾರದ ಅವಶ್ಯಕತೆಯಿಲ್ಲ: ದರ್ಶನ್ ಪತ್ನಿ ನಿಗೂಢ ಟ್ವೀಟ್ ಯಾರಿಗೆ? 

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿರುವ ನಿಗೂಢ ಟ್ವೀಟ್ ವೊಂದು ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿರುವ ನಿಗೂಢ ಟ್ವೀಟ್ ವೊಂದು ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಕರ್ಮ, ಪ್ರತೀಕಾರದ ಅವಶ್ಯಕತೆಯೇ ಇಲ್ಲ, ಸುಮ್ಮನೆ ಕುಳಿತು ಕಾದು ನೋಡುತ್ತಿದ್ದರೆ ಸಾಕು. ನಿನ್ನನ್ನು ನೋಯಿಸಿದವರು ಕ್ರಮೇಣ ತಮ್ಮನ್ನು ತಾವೇ ನಾಶ ಮಾಡಿಕೊಳಅಳುತ್ತಾರೆ. ನೀವು ಅದೃಷ್ಟವಂತರಾಗಿದ್ದರೆ, ಅದನ್ನೆಲ್ಲ ನೋಡುವ ಅವಕಾಶವನ್ನೂ ದೇವರು ನಿಮಗೆ ನೀಡುತ್ತಾನೆಂದು ಟ್ವೀಟ್ ಮಾಡಿದ್ದಾರೆ. 

ಈ ಸಂದೇಶವನ್ನು ಚಪ್ಪಾಳೆ ಹಾಗೂ ನಗುಮುಖದ ಸ್ಮೈಲಿಗಳ ಜೊತೆಗೆ ಯಾರ ಹೆಸರನ್ನೂ ಹಾಕದೆ, ಯಾರಿಗೆ ತಲುಪಬೇಕೋ ಅವರಿಗೆ ತಲುವಂತೆ ವಿಜಯಲಕ್ಷ್ಮೀಯವರು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಇದೀಗ ಚಿತ್ರರಂದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ವಿಜಯಲಕ್ಷ್ಮೀ ಮತ್ತು ದರ್ಶನ್ ಸಾಂಸಾರಿಕ ಜೀವನದಲ್ಲಿ ಬಿರುಕು ಬಿಟ್ಟಿದ್ದ ಸುದ್ದಿಗಳು ಹಲವು ವರ್ಷಗಳ ಹಿಂದೆಯೇ ಬಂದಿದ್ದವು. ದರ್ಶನ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಕೆಲವು ವರ್ಷಗಳ ಹಿಂದೆ ವಿಜಯಲಕ್ಷ್ಮಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಆಮೇಲೆ ಆ ಪ್ರಕರಣ ಸುಖಾಂತ್ಯ ಕಂಡಿತ್ತು. ನಂತರ ದರ್ಶನ್ ಮತ್ತು ವಿಜಯಲಕ್ಷ್ಮೀ ಜೊತೆಯಲ್ಲಿದ್ದಾರೆಂಬ ಸುದ್ದಿಗಳೂ ಬಂದಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT