ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಕೆಜಿಎಫ್ 2 ಚಿತ್ರದಲ್ಲಿ ಯಶ್‍ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

ಯಶ್-ಸಂಜಯ್ ದತ್
Vishwanath S
Updated On : 19 Sept 2019, 7:23 pm

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

ಕೆಜಿಎಫ್ 2 ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಇನ್ನು ಚಿತ್ರದ ಶೂಟಿಂಗ್ ಗಾಗಿ ಸಂಜಯ್ ದತ್ ಮೈಸೂರಿಗೆ ಬಂದಿದ್ದಾರೆ ಎನ್ನಲಾಗಿದೆ. ಈ ವೇಳೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. 

2012ರಲ್ಲಿ ನಾನು ನಟಿಸಿದ್ದ ಅಗ್ನೀಪತ್ ಚಿತ್ರ ತೆರೆಕಂಡಿತ್ತು. ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದೇ. ಈಗ ಮತ್ತದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗಿದೆ. ಅಗ್ನೀಪತ್ ಚಿತ್ರದ ನಂತರ ನನಗೆ ಸಿಕ್ಕ ಶ್ರೇಷ್ಠ ವಿಲನ್ ಪಾತ್ರ ಇದು ಎಂದು ಸಂಜಯ್ ದತ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

Advertisement

Advertisement

ಕೆಜಿಎಫ್ ಚಾಪ್ಟರ್ 1 ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಬರೋಬ್ಬರಿ 243 ಕೋಟಿ ರುಪಾಯಿಯನ್ನು ಗಳಿಸಿ ಕನ್ನಡದ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement