ನಂದ ಕಿಶೋರ್, ಧ್ರುವ ಸರ್ಜಾ 
ಸಿನಿಮಾ ಸುದ್ದಿ

ನಂದ ಕಿಶೋರ್ ಜೊತೆಗೆ ಧ್ರುವ ಸರ್ಜಾ ಮತ್ತೊಂದು ಸಿನಿಮಾ

ಪ್ರಸ್ತುತ ಪೊಗರು ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ನಿರ್ದೇಶಕ ನಂದಾ ಕಿಶೋರ್ ಹಾಗೂ ನಟ ಧ್ರುವ ಸರ್ಜಾ ಕಾಂಬಿನೇಷ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದೆ. 

ಪ್ರಸ್ತುತ ಪೊಗರು ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ನಿರ್ದೇಶಕ ನಂದಾ ಕಿಶೋರ್ ಹಾಗೂ ನಟ ಧ್ರುವ ಸರ್ಜಾ ಕಾಂಬಿನೇಷ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದೆ. 

ಧ್ರುವ ಸರ್ಜಾ ಅವರ ಮುಂದಿನ ಚಿತ್ರವನ್ನು ಛಾಯಾಗ್ರಹಣ- ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತಿತ್ತು. ಆದರೆ, ಇದನ್ನು ಮುಂದಕ್ಕೆ ಹಾಕಲಾಗಿದ್ದು, ನಂದ ಕಿಶೋರ್ ಜೊತೆಗೆ ಮತ್ತೊಂದು ಸಿನಿಮಾ ಮಾಡಲು ಆಕ್ಸನ್ ಫ್ರಿನ್ಸ್ ನಿರ್ಧರಿಸಿದ್ದಾರೆ.ಈ ಚಿತ್ರವನ್ನು  ಉದಯ್ ಕೆ ಮೆಹ್ತಾ ನಿರ್ಮಿಸುತ್ತಿದ್ದಾರೆ.

ಪೊಗರ್ ಸೆಟ್ ನಲ್ಲಿ ನಂದ ಕಿಶೋರ್ ಹಾಗೂ ಧ್ರುವ ಸರ್ಜಾ  ಕೆಲಸದಲ್ಲಿ ಉತ್ತಮ ಸಂಬಂಧ ಮೂಡಿದ್ದು, ಈ ಕಾಂಬಿನೇಷ್ ನಲ್ಲಿ ಮತ್ತೊಂದು ಚಿತ್ರ  ಬರಲು ಕಾರಣವಾಗಿದೆ. 

 ಧ್ರುವ ಸರ್ಜಾ ಒಂದೇ ನಿರ್ದೇಶಕರೊಂದಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ನಿರ್ದೇಶಕ ಚೇತನ್ ಕುಮಾರ್ ಅವರ ಬಹದ್ದೂರ್ ಹಾಗೂ ಭರ್ಜರಿ ಸಿನಿಮಾಗಳನ್ನು ಮಾಡಿದ್ದರು.

ಉದಯ್ ಮೆಹ್ತಾ ನಿರ್ಮಿಸುತ್ತಿರುವ ಮೊದಲ ಚಿತ್ರದಲ್ಲಿ ನಂದ ಕಿಶೋರ್ ಹಾಗೂ ಧ್ರುವ ಸರ್ಜಾ ಮತ್ತೆ ಒಂದಾಗುತ್ತಿದ್ದು, ಧ್ರುವ ಸರ್ಜಾ ಅವರ ಹುಟ್ಟುಹಬ್ಬ ಆಕ್ಟೋಬರ್ 6 ರಂದು ಅಧಿಕೃತವಾಗಿ ಘೋಷಿಸಲಾಗುತ್ತದೆ. ನವೆಂಬರ್ ನಲ್ಲಿ ಧ್ರುವ ಸರ್ಜಾ ವಿವಾಹ ನಡೆಯಲಿದ್ದು, ಡಿಸೆಂಬರ್ ಅಥವಾ ಜನವರಿ 2020 ರಲ್ಲಿ ಚಿತ್ರೀಕರಣ ನಡೆಯಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!