ಸುಧಾ ನಾರಾಯಣಮೂರ್ತಿ 
ಸಿನಿಮಾ ಸುದ್ದಿ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಫೋಸಿಸ್ ಫೌಂಡೇಶನ್: ಜೀವನಾಶ್ಯಕ ವಸ್ತುಗಳ ವಿತರಣೆ

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಹಸ್ರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್,  ಫೌಂಡೇಶನ್  ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಮುಂದಾಗಿದ್ದಾರೆ

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಹಸ್ರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್,  ಫೌಂಡೇಶನ್  ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಮುಂದಾಗಿದ್ದಾರೆ

ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು 
ಇನ್ಫೋಸಿಸ್ ಫೌಂಡೇಶನ್ ವಿತರಿಸುತ್ತಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್ ಆಫೀಸ್ ಬಳಿ ಚಾಲನೆ ನೀಡಲಾಯಿತು.

ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ  ವಾಣಿಜ್ಯ ಮಂಡಳಿಯ  ಕಲ್ಯಾಣ ನಿಧಿ ಅಧ್ಯಕ್ಷ ಸಾ ರಾ ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷ ರವಿ ಶಂಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಿಸಲಿದ್ದಾರೆ. 

ನಿರ್ಮಾಪಕ ರಮೇಶ್  ರೆಡ್ಡಿ ಮಾತನಾಡಿ,  ಇನ್ಪೋಸಿಸ್ ದೇಶ ಹಾಗೂ  ರಾಜ್ಯದಲ್ಲಿ ಅನೇಕ  ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT