ರಿಷಿ ಕಪೂರ್ 
ಸಿನಿಮಾ ಸುದ್ದಿ

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದಿಂದಾಗಿ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ. 

ಮುಂಬೈ: ತೀವ್ರ ಅನಾರೋಗ್ಯದಿಂದಾಗಿ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ. 

ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. ರಿಷಿ ಕಪೂರ್ ಅವರು ಮುಂಬೈನ ಹೆಚ್ಎನ್ ರಿಯಲಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ರಿಷಿ ಕಪೂರ್ ಅವರು ಆಸ್ಪತ್ರೆಯಲ್ಲಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರಿಗ ಉಸಿರಾಟ ಸಮಸ್ಯೆಯಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಣಧೀರ್ ಕಪೂರ್ ಅವರು ಹೇಳಿದ್ದಾರೆ. 

ಕಳೆದ ಫೆಬ್ರವರಿ ತಿಂಗಳಿನಲ್ಲಿಯೂ ರಿಷಿ ಕಪೂರ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ರಿಷಿ ಅವರು ಮೊದಲ ಬಾರಿಗೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೆಲ ಸೋಂಕಿನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿತ್ತು. 

ಮತ್ತೆ ಮುಂಬೈಗೆ ಮರಳಿದ ಬಳಿಕ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಏಪ್ರಿಲ್2 ರಿಂದಲೂ ರಿಷಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ ಗಳನ್ನು ಮಾಡಿಲ್ಲದೇ ಇರುವುದು ಇದೀಗ ಅಭಿಮಾನಿಗಳಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel