ಸಲಗ ಸಿನಿಮಾ ಹಾಡಿನ ಶೂಟಿಂಗ್ 
ಸಿನಿಮಾ ಸುದ್ದಿ

ಸಲಗ ಸಿನಿಮಾದ ಮಳೆಯೇ ಮಳೆಯೇ ಮಧುರ ಹಾಡಿಗೆ ಸಂಜನಾ ಆನಂದ್ ಸ್ಟೆಪ್ಸ್

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿದಂತೆ ಹಲವೆಡೆ ಸಲಗ ಸಿನಿಮಾ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಸ್ವಾಭಾವಿಕ ಮಳೆಯಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿದಂತೆ ಹಲವೆಡೆ ಸಲಗ ಸಿನಿಮಾ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಸ್ವಾಭಾವಿಕ ಮಳೆಯಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ.

ಈಗಾಗಲೇ “ಸಲಗ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಕೆಲವು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿತ್ತು. ಆದರೆ ಅಷ್ಟರಲ್ಲಾಗಲೇ ಕೊರೊನಾ ಕಂಟಕ ಎದುರಾಗಿದ್ದರಿಂದ, ಅನಿರೀಕ್ಷಿತವಾಗಿ ಚಿತ್ರೀಕರಣಕ್ಕೆ ಬ್ರೇಕ್‌ ಬಿದ್ದಿತು. 

ಈಗ ಮತ್ತೆ ಚಿತ್ರೀಕರಣವನ್ನು ಆರಂಭಿಸಿರುವ “ಸಲಗ’ ಚಿತ್ರತಂಡ ತನ್ನ ರೊಮ್ಯಾಂಟಿಕ್‌ ಹಾಡಿನ ಚಿತ್ರೀಕರಣಕ್ಕೆ ಮುಂದಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ನಾಯಕ – ನಾಯಕಿ ಸೇರಿದಂತೆ ಕೇವಲ 12 ಮಂದಿ  ತಂತ್ರಜ್ಞರೊಂದಿಗೆ “ಸಲಗ’ದ ಈ ಹಾಡನ್ನು ಚಿತ್ರೀಕರಿಸಲಾಗುತ್ತಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಹಸಿರಿನ ಸುಂದರ ತಾಣಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಈ ಹಾಡನ್ನು ಸೆರೆಹಿಡಿಯಲಾಗುತ್ತಿದೆ. “ಮಳೆಯೇ ಮಳೆಯೇ ಅಂಬೆಗಾಲಿಡುತ್ತಾ ಸುರಿಯೇ…’ ಎಂದು ಶುರುವಾಗುವ ಈ ರೊಮ್ಯಾಂಟಿಕ್‌ ಹಾಡಿಗೆ ಚರಣ್‌ ರಾಜ್‌ ಸಂಗೀತ ಸಂಯೋಜನೆ ಮಾಡಿದ್ದಾರೆ.

ನಾಯಕ ದುನಿಯಾ ವಿಜಯ್‌ ಮತ್ತು ನಾಯಕಿ ಸಂಜನಾ ಆನಂದ್‌ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ. ಅಲ್ಲದೆ ಇಡೀ ಹಾಡನ್ನು ನೈಜ ಮಳೆಯಲ್ಲೇ ಚಿತ್ರೀಕರಿಸಲಾಗುತ್ತಿದೆ. ದುನಿಯಾ ವಿಜಯ್‌ ನಟಿಸಿ, ನಿರ್ದೇಶಿಸುತ್ತಿರುವ “ಸಲಗ’ ಚಿತ್ರದಲ್ಲಿ ಡಾಲಿ ಧನಂಜಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಟಗರು’ ಖ್ಯಾತಿಯ ಕೆ.ಪಿ ಶ್ರೀಕಾಂತ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.­

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!