ಸೈಕಲ್ ನಲ್ಲಿ ಬೆಂಗಳೂರು ಸುತ್ತಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್- ವಿಡಿಯೋ
ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಮತ್ತು ಲಾಕ್ ಡೌನ್ ಕಾರಣದಿಂದ ಕಳೆದ ನಾಲ್ಕು ತಿಂಗಳಿನಿಂದ ಮನೆಯಲ್ಲಿಯೇ ಇದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಈಗ ತನ್ನ ನಿಯಮಿತ ವರ್ಕ್ ಔಟ್ ನ್ನು ಪುನರ್ ಆರಂಭಿಸಿದ್ದಾರೆ.
ಬೆಂಗಳೂರು: ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಮತ್ತು ಲಾಕ್ ಡೌನ್ ಕಾರಣದಿಂದ ಕಳೆದ ನಾಲ್ಕು ತಿಂಗಳಿನಿಂದ
ಮನೆಯಲ್ಲಿಯೇ ಇದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಈಗ ತನ್ನ ನಿಯಮಿತ ವರ್ಕ್ ಔಟ್ ನ್ನು ಪುನರ್ ಆರಂಭಿಸಿದ್ದಾರೆ.
ಇತ್ತೀಚಿಗೆ ಬೈಸಿಕಲ್ ನಲ್ಲಿ ಉದ್ಯಾನ ನಗರಿಯನ್ನು ಸುತ್ತಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸದಾಶಿವನಗರದ ಮನೆಯಿಂದ ಸೈಕಲ್ ಪ್ರಯಾಣ ಆರಂಭಿಸಿರುವ ಪುನೀತ್ ರಾಜ್ ಕುಮಾರ್, ಮೆಕ್ರಿ ಸರ್ಕಲ್, ವಸಂತ ನಗರ, ಚಾಲುಕ್ಯ ಸರ್ಕಲ್, ವಿಧಾನ ಸೌಧ, ಬಹು ಅಂತಸ್ಥಿನ ಕಟ್ಟಡ, ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ಮಹಾತ್ಮ ಗಾಂಧಿ ರಸ್ತೆಯಲ್ಲಿ ಪೆಟ್ಲು ತುಳಿದು ಆನಂದಿಸಿದ್ದಾರೆ.
ಈ ಹಿಂದೆ ಕೂಡಾ ಸದಾಶಿವನಗರದಿಂದ ನಂದಿ ಬೆಟ್ಟದವರೆಗೂ 60 ಕಿಲೋ ಮೀಟರ್ ದೂರ ಸೈಕಲ್ ನಲ್ಲಿಯೇ ಪ್ರಯಾಣ
ಮಾಡಿದ್ದರು. ಈ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.