ಇಂದ್ರಜಿತ್ ಲಂಕೇಶ್ 
ಸಿನಿಮಾ ಸುದ್ದಿ

ಸಿಸಿಬಿ ಕಚೇರಿಯಲ್ಲಿ ಇಂದ್ರಜಿತ್ ಲಂಕೇಶ್ ವಿಚಾರಣೆ:ಪೊಲೀಸರ ಮುಂದೆ ನೀಡುತ್ತಾರಾ ಸ್ಯಾಂಡಲ್ ವುಡ್ ನಶೆಯರ ಪಟ್ಟಿ? 

ಸ್ಯಾಂಡಲ್ ವುಡ್ ನಲ್ಲಿ ಕೆಲ ನಟ, ನಟಿಯರು, ನಿರ್ದೇಶಕರು, ಸಂಗೀತ ನಿರ್ದೇಶಕರು ಮಾದಕ ವಸ್ತು ತೆಗೆದುಕೊಳ್ಳುತ್ತಾರೆ, ಹೊಸದಾಗಿ ಬಂದಿರುವವರಲ್ಲಿ ಈ ಅಭ್ಯಾಸ ಹೆಚ್ಚಾಗಿದೆ, ಈ ಬಗ್ಗೆ ನನ್ನಲ್ಲಿ ಪುರಾವೆಗಳಿವೆ, ಪೊಲೀಸರು ಭದ್ರತೆ ಒದಗಿಸಿದರೆ ಅಂತವರ ಹೆಸರು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಡ್ರಗ್ಸ್ ತೆಗೆದುಕೊಳ್ಳುವವರ ಪಟ್ಟಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕೆಲ ನಟ, ನಟಿಯರು, ನಿರ್ದೇಶಕರು, ಸಂಗೀತ ನಿರ್ದೇಶಕರು ಮಾದಕ ವಸ್ತು ತೆಗೆದುಕೊಳ್ಳುತ್ತಾರೆ, ಹೊಸದಾಗಿ ಬಂದಿರುವವರಲ್ಲಿ ಈ ಅಭ್ಯಾಸ ಹೆಚ್ಚಾಗಿದೆ, ಈ ಬಗ್ಗೆ ನನ್ನಲ್ಲಿ ಪುರಾವೆಗಳಿವೆ, ಪೊಲೀಸರು ಭದ್ರತೆ ಒದಗಿಸಿದರೆ ಅಂತವರ ಹೆಸರು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಡ್ರಗ್ಸ್ ತೆಗೆದುಕೊಳ್ಳುವವರ ಪಟ್ಟಿ ಕೊಡಿ ಎಂದು ನಗರ ಅಪರಾಧ ದಳ ಪೊಲೀಸರು ನೊಟೀಸ್ ನೀಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿ ಎದುರು ಇಂದು ವಿಚಾರಣೆಗೆ ಹಾಜರಾಗಿರುವ ಇಂದ್ರಜಿತ್ ಲಂಕೇಶ್ ಅವರನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ.  ಇದಕ್ಕೂ ಮುನ್ನ ಕಚೇರಿ ಆವರಣದಲ್ಲಿ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳು ಇಂದ್ರಜಿತ್ ಲಂಕೇಶ್ ಅವರನ್ನು ಮಾತನಾಡಿಸಿದಾಗ, ವಿಚಾರಣೆ ಮುಗಿಸಿ ಹೊರಬಂದ ಮೇಲೆ ಎಲ್ಲ ಮಾತನಾಡುತ್ತೇನೆ, ಈಗ ಬೇಡ, ನಾನು ಕೂಡ ಪತ್ರಕರ್ತ, ನಿಮ್ಮ ವೃತ್ತಿಯನ್ನು ಗೌರವಿಸುತ್ತೇನೆ, ಆದರೆ ಈಗ ಯಾವುದನ್ನೂ ಹೇಳುವುದಿಲ್ಲ, ಪೊಲೀಸರ ಮುಂದೆ ಸಾಕ್ಷಿಗಳನ್ನು ನೀಡಿ ಬರುತ್ತೇನೆ ಎಂದರು.

ಈ ಪ್ರಕರಣದಲ್ಲಿ ಯಾರಿಂದಲಾದರೂ ಒತ್ತಡವಿದೆಯೇ ಎಂದು ಕೇಳಿದ್ದಕ್ಕೆ ಯಾರಿಂದಲೂ ಒತ್ತಡವಿಲ್ಲ, ನಾನು ನೀಡಿರುವ ಹೇಳಿಕೆಗೆ ಸಾಕ್ಷಿ ಸಮೇತವಾಗಿ ದಾಖಲೆಗಳನ್ನು ಪೊಲೀಸರ ಮುಂದೆ ಒದಗಿಸುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದರು. 

ಸಿಸಿಬಿ ಕಚೇರಿಗೆ ಆಗಮಿಸಿದ ಇಂದ್ರಜಿತ್ ಲಂಕೇಶ್ ಅವರ ಕೈಯಲ್ಲಿ ಒಂದಷ್ಟು ದಾಖಲೆಗಳಿದ್ದು ಅವುಗಳಲ್ಲಿ ತಾವು ಮಾಡಿರುವ ಆರೋಪಕ್ಕೆ, ನೀಡಿದ್ದ ಹೇಳಿಕೆಗೆ ಸಾಕ್ಷಿಯಾಗಿ ಪೂರಕ ಪುರಾವೆಗಳನ್ನು ತಂದಿರಬಹುದು ಎಂದು ಹೇಳಲಾಗುತ್ತಿದೆ. 

ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಇಂದ್ರಜಿತ್ ಲಂಕೇಶ್, ಸ್ಯಾಂಡಲ್ ವುಡ್ ನಲ್ಲಿ ಯಾವೆಲ್ಲಾ ಕಲಾವಿದರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ, ಅವರಿಗೆ ಇರುವ ಸಂಪರ್ಕವೇನು, ಎಲ್ಲಿಂದ ಪೂರೈಕೆಯಾಗುತ್ತಿವೆ ಎಂಬ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದರಿಂದ ಇನ್ನಷ್ಟು ಮಾದಕ ನಶೆಯ ದಂಧೆ, ಕರಾಳ ಮುಖ ಹೊರಬರಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!