ಸಿನಿಮಾ ಸುದ್ದಿ

ಶಂಭೋ ಶಿವ ಶಂಕರ: ಖಡಕ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಶಶಿ ಕುಮಾರ್

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.‌

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.‌

ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶಶಿ ಕುಮಾರ್ ಅವರು ಕಾಣಿಸಿಕೊಳಲಿದ್ದು, ಚಿತ್ರದಲ್ಲಿ ಅವರದು ಮಹತ್ವದ ಪಾತ್ರ ಎನ್ನುತ್ತಾರೆ ನಿರ್ದೇಶಕರು.

ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9ರಿಂದ ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಶಶಿ ಕುಮಾರ್ ಸೇರಿದಂತೆ ಚಿತ್ರದಲ್ಲಿ ಅಭಿನಯಿಸುವ ಎಲ್ಲಾ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರವನ್ನು  ಶಂಕರ್ ಕೋನಮಾನಹಳ್ಳಿ ನಿರ್ದೇಶಿಸಿದ್ದಾರೆ.

'ಶಂಭೋ ಶಿವ ಶಂಕರ' ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. 

ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ‌. ನಟರಾಜ್ ಮುದ್ದಾಲ  ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel