ಯಶ ಶಿವಕುಮಾರ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ನಟನೆಯ 'ಶಿವಪ್ಪ' ಸಿನಿಮಾ ತಂಡಕ್ಕೆ ಯಶ ಶಿವಕುಮಾರ್ ಸೇರ್ಪಡೆ

ಹರಿಪ್ರಸಾದ್ ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ ಪದವಿ ಪೂರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪಾದಾರ್ಪಣೆ ಮಾಡಿದ ಯಶ ಶಿವಕುಮಾರ್ ನಟ ಶಿವರಾಜ್ ಕುಮಾರ್ ಅಭಿನಯದ ಶಿವಪ್ಪ ಚಿತ್ರದಲ್ಲಿ  ನಟಿಸುತ್ತಿದ್ದಾರೆ.

ಹರಿಪ್ರಸಾದ್ ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ ಪದವಿ ಪೂರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪಾದಾರ್ಪಣೆ ಮಾಡಿದ ಯಶ ಶಿವಕುಮಾರ್ ನಟ ಶಿವರಾಜ್ ಕುಮಾರ್ ಅಭಿನಯದ ಶಿವಪ್ಪ ಚಿತ್ರದಲ್ಲಿ  ನಟಿಸುತ್ತಿದ್ದಾರೆ.

ವಿಜಯ್ ಮಿಲ್ಟನ್ ನಿರ್ದೇಶನದ ಕಮರ್ಷಿಯಲ್ ಸಿನಿಮಾದಲ್ಲಿ ಅಂಜಲಿ ನಟಿಸುತ್ತಿದ್ದು ಅವರು ಜೊತೆಗೆ ಯಶ ಶಿವಕುಮಾರ್ ಕೂಡ ನಾಯಕಿಯಾಗಿ ಸೇರಿಕೊಂಡಿದ್ದಾರೆ.

ಸಿನಿಮಾದಲ್ಲಿ ಧನಂಜಯ್ ಗೆ ನಾಯಕಿಯಾಗಲಿದ್ದಾರೆ, ನವೆಂಬರ್ 23 ರಿಂದ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

8 ದಿನಗಳ ಶೂಟಿಂಗ್ ನಲ್ಲಿ 23 ಸನ್ನಿವೇಷಗಳನ್ನು ಚಿತ್ರೀಕರಿಸಲಾಗಿದೆ, ಡಿಸೆಂಬರ್ 8 ರಿಂದ ಮತ್ತೊಂದು ಹಂತದ ಶೂಟಿಂಗ್ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಮಿಲ್ಟನ್ ಟ್ವೀಟ್ ಮಾಡಿದ್ದಾರೆ.

ಕೃಷ್ಣ ಸಾರ್ಥಕ್ ನಿರ್ಮಾಣ ಮಾಡುತ್ತಿರುವ ಶಿವಪ್ಪ ಸಿನಿಮಾದಲ್ಲಿ ವಿಜಯ್ ಮಿಲ್ಟನ್ ಮೊದಲ ಬಾರಿಗೆ ಕನ್ನಡ ಸಿನಿಮಾ ನಿರ್ದೇಶಿಸುತ್ತಿದ್ದಾರೆ, ಕಥೆಯನ್ನು ವಿಜಯಮಿಲ್ಟನ್ ಬರೆದಿದ್ದಾರೆ. ಡಾಲಿ ಧನಂಜಯ್ ಮತ್ತು ಶಿವರಾಜ್ ಕುಮಾರ್ ಟಗರು ನಂತರ ಮತ್ತೆ ಒಂದಾಗಿದ್ದಾರೆ.

ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಐದು ವರ್ಷಗಳ ನಂತರ ಅಂಜಲಿ ಮತ್ತೆ ಕನ್ನಡದಲ್ಲಿ ನಟಿಸುತ್ತಿದ್ದಾರೆ. ಉಮಾಶ್ರಿ ಮತ್ತು ಶಶಿಕುಮಾರ್ ತಾರಾಗಣದಲ್ಲಿದ್ದಾರೆ. ಅನೂಪ್ ಸಿಳೀನ್ ಸಿನಿಮಾಗೆ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!