ಹೊಸ ವರ್ಷದ ಪ್ರಯುಕ್ತ ಕಿಕ್ಕೇರಿಸಲು ಚಂದನ್ ಶೆಟ್ಟಿ ಪಾರ್ಟಿ ಸಾಂಗ್ ಮೂಲಕ ಆಗಮಿಸುತ್ತಿದ್ದಾರೆ.
ಈ ಸಲ ಒಂದಷ್ಟು ವಿಶೇಷಗಳ ಜತೆಗೆ ಚಂದನ್ ಶೆಟ್ಟಿ ಎಂಟ್ರಿಯಾಗುತ್ತಿದೆ. ಕನ್ನಡದ ಜತೆಗೆ ತೆಲುಗಿನಲ್ಲಿಯೂ ಈ ಹಾಡು ಮೂಡಿಬರಲಿದ್ದು, ಅದ್ಧೂರಿ ವೆಚ್ಚದಲ್ಲಿ, ಕಲರ್ ಫುಲ್ ಸೆಟ್ ನಲ್ಲಿ ಎರಡು ದಿನ ಹಾಡಿನ ಶೂಟಿಂಗ್ ನಡೆಯಲಿದೆ. ಬೆಂಗಳೂರಿನ ದೊಡ್ಡ ದೊಡ್ಡ ಹೋಟೆಲ್ ಮತ್ತು ಪಬ್ ಗಳಲ್ಲಿ ಈ ಹಾಡಿನ ಚಿತ್ರೀಕರಣವಾಗಲಿದೆ.
'ಪಾರ್ಟಿ ಫ್ರೀಕ್' ಹೆಸರಿನ ಈ ಹಾಡನ್ನು ಚೈತನ್ಯ ಲಕಂಸಾನಿ ನಿರ್ಮಾಣ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನೀಡಿ, ಸಾಹಿತ್ಯ ಬರೆದು ಧ್ವನಿ ನೀಡಿ ಹಾಡಿನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಈ ಕಲರ್ ಫುಲ್ ಹಾಡಿನಲ್ಲಿ ಮಸ್ತ್ ಮಸ್ತ್ ಡಾನ್ಸ್ ಮಾಡಲಿದ್ದಾರೆ. ಅಷ್ಟೇ ಅಲ್ಲ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಸಹ ಈ ಹಾಡಿನಲ್ಲಿರಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಧರ್ಮ ಅವರನ್ನು ತೋರಿಸಲಿದ್ದಾರೆ ಚಂದನ್.
ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದ ಈ ಹಾಡು ಡಿಸೆಂಬರ್ 26ರಂದು ಯುನೈಟ್ ಆಡಿಯೋಸ್ನಲ್ಲಿ ರಿಲೀಸ್ ಆಗಲಿದೆ.