ಪೊಗರು ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ದ್ರುವ ಸರ್ಜಾ ಅಭಿನಯದ 'ಪೊಗರು' ಸಿನಿಮಾ 2021 ಜನವರಿಯಲ್ಲಿ ಬಿಡುಗಡೆ!

ದ್ರುವಾ ಸರ್ಜಾ ಅಭಿನಯದ ಪೊಗರು ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು, ಬಿಡುಗಡೆಯ ದಿನಾಂಕವನ್ನು ಅಭಿಮಾನಿಗಳು ಕಾತರದಿಂದ ಎದುರುನೋಡುತ್ತಿದ್ದಾರೆ.

ದ್ರುವಾ ಸರ್ಜಾ ಅಭಿನಯದ ಪೊಗರು ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು, ಬಿಡುಗಡೆಯ ದಿನಾಂಕವನ್ನು ಅಭಿಮಾನಿಗಳು ಕಾತರದಿಂದ ಎದುರುನೋಡುತ್ತಿದ್ದಾರೆ. 

ಈ ಹಿಂದೆ ಸಿನಿಮಾ ಬಗ್ಗೆ ಮಾತನಾಡಿದ್ದ ನಿರ್ದೇಶಕ ನಂದ ಕಿಶೋರ್ ಪೊಗರು ಸಿನಿಮಾ ಡಿಸೆಂಬರ್-ಜನವರಿ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯನ್ನು ತಿಳಿಸಿದ್ದರು. ಈಗ ಸಿನಿಮಾದ ನಿರ್ಮಾಪಕ ಬಿಕೆ ಗಂಗಾಧರ್ ಸಿನಿಮಾ ಬಿಡುಗಡೆಯ ಬಗ್ಗೆ ಮಾತನಾಡಿದ್ದು, ಜನವರಿ ತಿಂಗಳಲ್ಲಿ ಪೊಗರು ತೆರೆಕಾಣಲಿದೆ ಎಂಬುದನ್ನು ಖಚಿತಪಡಿಸಿದ್ದು ದಿನಾಂಕವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದೂ ಹೇಳಿದ್ದಾರೆ.

ಪೊಗರು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಅಂತಿಮ ಹಂತಕ್ಕೆ ಬಂದಿದ್ದು, ಡಬ್ಬಿಂಗ್ ಭಾಗವನ್ನು ಪೂರ್ಣಗೊಳಿಸುವುದಕ್ಕಾಗಿ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲೇ ಇದ್ದರು. 

ಪ್ರೊಡಕ್ಷನ್ ಹೌಸ್ ಪೊಗರು ಚಿತ್ರವನ್ನು ಕನ್ನಡದಲ್ಲಿ ಅಷ್ಟೇ ಅಲ್ಲದೇ ತೆಲುಗು, ತಮಿಳು ಹಿಂದಿಗಳಲ್ಲೂ ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿದ್ದು, ಡಬ್ಬಿಂಗ್ ಕೆಲಸವೂ ಪ್ರಗತಿಯಲ್ಲಿದೆ.

ಹಿಂದಿ ಡಬ್ಬಿಂಗ್ ಹಕ್ಕುಗಳನ್ನು 7.2 ಕೋಟಿಗಳಿಗೆ ಮಾರಾಟ ಮಾಡಲಾಗಿದ್ದರೆ, ತೆಲುಗು ಡಬ್ಬಿಂಗ್ ಹಕ್ಕುಗಳೂ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿದೆ. ಎಲ್ಲಾ ವರ್ಗದ ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಲಿದೆ ಎನ್ನುತ್ತಾರೆ ಗಂಗಾಧರ್.
ಧನಂಜಯ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಯೂರಿ, ರವಿಶಂಕರ್, ಚಿಕ್ಕಣ್ಣ ತಾರಾಗಣದಲ್ಲಿದ್ದಾರೆ. ಪೊಗರುಗೆ ಚಂದನ್ ಶೆಟ್ಟಿ ಸಂಗೀತ ನೀಡಿದ್ದು, ವಿ ಹರಿಕೃಷ್ಣ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪೊಗರು ಚಿತ್ರದ ಛಾಯಾಗ್ರಾಹಣವನ್ನು ತಮಿಳಿನ ಖ್ಯಾತ ಛಾಯಾಗ್ರಾಹಕ ವಿಜಯ್ ಮಿಲ್ಟನ್ ಮಾಡಿದ್ದಾರೆ.4
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel