ಡಾ. ವಿಷ್ಣುವರ್ಧನ್, ಸುಮಲತಾ 
ಸಿನಿಮಾ ಸುದ್ದಿ

ವಿಷ್ಣುವಿನ ಘನತೆಗೆ ಸಾಸಿವೆ ಕಾಳಿನಷ್ಟು ಧಕ್ಕೆಯಾಗದು- ಸುಮಲತಾ

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.
 
ಶನಿವಾರ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್, ಜಗ್ಗೇಶ್, ಗಣೇಶ್, ಶ್ರೀಮುರುಳಿ, ಸೃಜನ್ ಲೋಕೇಶ್ ಸೇರಿದಂತೆ ಅನೇಕ ನಿರ್ದೇಶಕರು ವಿಜಯ್ ರಂಗರಾಜು ಅವರ ಮಾತುಗಳನ್ನು ಖಂಡಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸಂಸದೆ ಸುಮಲತಾ ಅಂಬರೀಷ್ , ಸರಣಿ ಟ್ವೀಟ್ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ 'ಚೀಪ್ ಪಬ್ಲಿಸಿಟಿ' ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!