ಸಿನಿಮಾ ಸುದ್ದಿ

ತೆಲುಗು ಭಾಷೆಯಲ್ಲೂ ಶ್ರೀ ಮುರುಳಿ ನಟನೆಯ 'ಮದಗಜ'!

Shilpa D

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಟೀಸರ್ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಟೀಸರ್ ಲಾಂಚ್ ದಿನಾಂಕವನ್ನು ಮದಗಜ ಚಿತ್ರತಂಡ ಕ್ರಿಸ್ ಮಸ್ ದಿನ ಅನೌನ್ಸ್ ಮಾಡಿದೆ.

ಮದಗಜ ಕನ್ನಡ ಫಸ್ಟ್ ಲುಕ್ ಟೀಸರ್ ಈಗಾಗಲೇ ಬಿಡುಗಡೆಯಾಗಿ ಭಾರೀ ವೀಕ್ಷಣೆ ಪಡೆದಿದೆ. ಇದೀಗ ತೆಲುಗಿನಲ್ಲೂ ಸಿನಿಮಾ ಬಿಡುಗಡೆ ಮಾಡಲುದ್ದೇಶಿಸಿರುವ ಚಿತ್ರತಂಡ ಹೊಸ ವರ್ಷಕ್ಕೆ ಅಂದರೆ ಜನವರಿ 1 ರಂದು ಟೀಸರ್ ಲಾಂಚ್ ಮಾಡಲು ತೀರ್ಮಾನಿಸಿದೆ. ಜನವರಿ 1 ರಂದು 10.10 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ತೆಲುಗು ಟೀಸರ್ ಬಿಡುಗಡೆಯಾಗಲಿದೆ.

ಹೊಸ ವರ್ಷದ ಪ್ರಯುಕ್ತ ಮದಗಜ ಸಿನಿಮಾದ ತೆಲುಗು ವರ್ಷನ್ ಟೀಸರ್ ಬಿಡುಗಡೆಯಾಗಲಿದೆ ಎಂದು ಸ್ವತಃ ಶ್ರೀಮುರಳಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಶ್ರೀಮುರಳಿ ಜೊತೆ ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, 'ಅಯೋಗ್ಯ' ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

ಈಗಾಗಲೇ ಎರಡು ಹಂತದ ಚಿತ್ರೀಕರಣ ಮುಗಿಸಿರುವ ಮದಗಜ ಸಿನಿಮಾ ತಂಡ ಅಂತಿಮ ಹಂತದ ಶೂಟಿಂಗ್ ಬಾಕಿ ಉಳಿಸಿಕೊಂಡಿದೆ. ಶ್ರೀಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ, ಜಗಪತಿ ಬಾಬು ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ತಮಿಳು ನಟಿ ದೇವಯಾನಿ ಬೆಳ್ಳಿತೆರೆಗೆ ಮತ್ತೆ ಪ್ರವೇಶಿಸುತ್ತಿದ್ದಾರೆ. ರವಿ ಬಸ್ರೂರ್ ಸಿನಿಮಾಗೆ ಸಂಗೀತ ನೀಡಿದ್ದಾರೆ.

SCROLL FOR NEXT