ನಿಹಾರಿಕಾ-ಅಕ್ಷಯ್ ಮದುವೆ 
ಸಿನಿಮಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ

ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಮಗಳು ನಿಹಾರಿಕಾ ಅರವಿಂದ್ ಸಹೋದ್ಯೋಗಿ ಅಕ್ಷಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರು: ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಮಗಳು ನಿಹಾರಿಕಾ ಅರವಿಂದ್ ಸಹೋದ್ಯೋಗಿ ಅಕ್ಷಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಬೆಳಿಗ್ಗೆ 11ರಿಂದ 11.30ರ ಶುಭ ಸಮಾರಂಭದಲ್ಲಿ ಮದುವೆ ಕಾರ್ಯಕ್ರಮ ನೆರವೇರಿದ್ದು ನಿಹಾರಿಕಾ ಸಹೋದ್ಯೋಗಿ ಅಕ್ಷಯ್ ನನ್ನು ವರಿಸಿದ್ದಾರೆ. 

ಕೊರೋನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಕೇವಲ ಆತ್ಮೀಯರಿಗೆ ಮಾತ್ರ ಮದುವೆಗೆ ಆಮಂತ್ರಣ ನೀಡಲಾಗಿತ್ತು. ಇನ್ನು ಜನವರಿ 16ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. 

ನಿಹಾರಿಕಾ ಮತ್ತು ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದಾರೆ. 

ಡಿ.27ರ ರಾತ್ರಿ ಸಂಗೀತ್ ಕಾರ್ಯಕ್ರಮ ನಡೆದಿದ್ದು ಅದರಲ್ಲಿ ಸ್ನೇಹಿತರು ಮತ್ತು ಕನ್ನಡ ಚಿತ್ರರಂಗದ ಕೆಲವರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!