ಕುರಿ ಪ್ರತಾಪ್, ಸುದೀಪ್, ಶೈನ್ ಶೆಟ್ಟಿ 
ಸಿನಿಮಾ ಸುದ್ದಿ

ಶೈನ್ ಆದ ಶೈನ್ ಶೆಟ್ಟಿ: ಬಿಗ್ ಬಾಸ್ ಸೀಸನ್ 7ರ ವಿನ್ನರ್ 

ಭಾರಿ ಕುತೂಹಲ ಮೂಡಿಸಿದ್ದ ಕನ್ನಡದ ಬಿಗ್ ಬಾಸ್ ಕನ್ನಡ ಸೀಸನ್ 7ರ 113 ದಿನಗಳ ಅದ್ಬುತವಾದ ಪ್ರಯಾಣ ಕೊನೆಗೊಂಡಿದೆ. ನಟ ಶೈನ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ಕನ್ನಡದ ಬಿಗ್ ಬಾಸ್ ಕನ್ನಡ ಸೀಸನ್ 7ರ 113 ದಿನಗಳ ಅದ್ಬುತವಾದ ಪ್ರಯಾಣ ಕೊನೆಗೊಂಡಿದೆ. ನಟ ಶೈನ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ವಾಸುಕಿ ವೈಭವ್ ಮನೆಯಿಂದ ಹೊರಬಂದ ಬಳಿಕ   ಕಾಮಿಡಿ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಕುರಿ ಪ್ರತಾಪ್  ಹಾಗೂ ಶೈನ್ ಶೆಟ್ಟಿ ನಡುವೆ ಭಾರೀ ಪೈಪೋಟಿ ನಡೆದಿತ್ತು.

ಕುರಿ ಪ್ರತಾಪ್ ಮೇಲೆ ಹಲವು ಮಂದಿ ನಿರೀಕ್ಷೆ ಹೊಂದಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಕುಂದಾಪುರದ ಶೈನ್ ಶೆಟ್ಟಿ ವಿಜಯದ ನಗೆ  ಬೀರಿದರು.ಕುರಿ ಪ್ರತಾಪ್ ರನರ್ ಅಪ್ ಗೆ ತೃಪ್ತಿ ಪಟ್ಟುಕೊಳ್ಳುವಂತಾಯಿತು. 

ಶೈನ್ ಬಿಗ್ ಬಾಗ್ ಟ್ರೋಫಿ ಮಾತ್ರವಲ್ಲದೇ ಬಿಗ್ ಬಾಸ್ ಘೋಷಣೆ ಮಾಡಿರುವ 50 ಲಕ್ಷ ಹಾಗೂ ಹೆಚ್ಚುವರಿಯಾಗಿ 11 ಲಕ್ಷ ಒಟ್ಟು 61 ಲಕ್ಷ ರೂಪಾಯಿಯನ್ನು ತಮ್ಮದಾಗಿಸಿಕೊಂಡರು. ಶೈನ್ ಶೆಟ್ಟಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 

16 ವಾರಗಳ ಕಾಲ ಪ್ರಾಮಾಣಿಕವಾಗಿ ಪ್ರೇಕ್ಷಕರನ್ನು ರಂಜಿಸಲು ಪ್ರಯತ್ನಿಸಿದ್ದು, ತಮಗೆ ವೋಟ್ ಮಾಡಿದ ಎಲ್ಲರಿಗೂ ಧನ್ಯವಾದ ಆರ್ಪಿಸುವುದಾಗಿ ಶೈನ್ ಶೆಟ್ಟಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!