ಕೆಜಿಎಫ್ -2 ಪೋಸ್ಟರ್ 
ಸಿನಿಮಾ ಸುದ್ದಿ

ನಿಮ್ಮ ಎಲ್ಲಾ ನಿರೀಕ್ಷೆಗಳನ್ನು ಕೆಜಿಎಫ್-2 ಈಡೇರಿಸುತ್ತೆ: ಯಶ್ ಭರವಸೆ

ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಬಗ್ಗೆ ಅವರ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿದ್ದು, ಅದರ ಬಗ್ಗೆ ತಮಗೆ ಅರಿವಿದೆ ಎಂದು ಯಶ್ ತಿಳಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಬಗ್ಗೆ ಅವರ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿದ್ದು, ಅದರ ಬಗ್ಗೆ ತಮಗೆ ಅರಿವಿದೆ ಎಂದು ಯಶ್ ತಿಳಿಸಿದ್ದಾರೆ.

ತಮ್ಮ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಯಶ್, ಕೆಜಿಎಫ್-2 ಸಿನಿಮಾ ಪ್ರೇಕ್ಷಕರ ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತದೆ ಎಂದು ಹೇಳಿದ್ದಾರೆ. ಇದು ಅತಿಯಾದ ಆತ್ಮವಿಶ್ವಾಸ ಎಂದುಕೊಳ್ಳಬೇಡಿ,  ಏಕೆಂದರೇ ಇಡೀ ಚಿತ್ರತಂಡ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ನಾನು ಶೂಟಿಂಗ್ ಎಂಜಾಯ್ ಮಾಡುತ್ತಿದ್ದೇನೆ, ಕಡಪದಲ್ಲಿ ಹಲವು ದಿನಗಳ ಶೂಟಿಂಗ್ ಮುಗಿಸಿ ಹುಟ್ಟು ಹಬ್ಬ ಆಚರಣೆಗಾಗಿ  ಬೆಂಗಳೂರಿಗೆ ಆಗಮಿಸಿರುವುದಾಗಿ ಹೇಳಿದ್ದಾರೆ.

ಕೆಜಿಎಫ್ ಮುಗಿದ ನಂತರ ಕೇವಲ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾತ್ರ ಒಪ್ಪಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಯಶ್, ಅದು ಪ್ರತಿ ಸಿನಿಮಾ ಮೇಲೆ ಅವಲಂಬಿತವಾಗಿರುತ್ತದೆ.  ಆ ಕಥೆ ಅದಕ್ಕೆ  ಒಪ್ಪುತ್ತದೆ ಎಂದಾದರೇ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ, ಪ್ರತಿಯೊಬ್ಬರು ನನ್ನ ಸಿನಿಮಾಗಾಗಿ ಕಾಯುತ್ತಿದ್ದಾರೆ, ಹೀಗಾಗಿ ಏಕೆ 5 ಭಾಷೆಗಳಲ್ಲಿ ಸಿನಿಮಾ ಮಾಡಬಾರದು ಎಂಬ ಪ್ರಶ್ನೆ ಮೂಡಿತು.  ಏಕೆಂದರೇ ಅಭಿಮಾನಿಗಳನ್ನು ರಂಜಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ