ವಿಂಡೋ ಸೀಟ್ ನಲ್ಲಿ ಸಂಜನಾ ಆನಂದ್ ಮತ್ತು ಅಮೃತಾ ಅಯ್ಯಂಗಾರ್
ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಸಿನಿಮಾಗೆ 'ರಂಗಿತರಂಗ' ನಿರೂಪ್ ಭಂಡಾರಿ ನಾಯಕನಟರಾಗಿದ್ದು, ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಸಿನಿಮಾಗೆ 'ರಂಗಿತರಂಗ' ನಿರೂಪ್ ಭಂಡಾರಿ ನಾಯಕನಟರಾಗಿದ್ದು, ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಮೂವರು ತೆರೆ ಹಂಚಿಕೊಳ್ಳುತ್ತಿದ್ದಾರೆ, ಕೆಮಿಸ್ಟ್ರಿ ಕರಿಯಪ್ಪ ಸಿನಿಮಾ ಮೂಲಕ ಸಂಜನಾ ಆನಂದ್ ಚಿತ್ರರಂಗ ಪ್ರವೇಶಿಸಿದರು. ಈಗ ಸದ್ಯ ಬ್ಯುಸಿ ನಾಯಕಿಯಾಗಿದ್ದಾರೆ.
ದುನಿಯಾ ವಿಜಯ್ ನಿರ್ದೇಶನದ ಸಲಗ ಸಿನಿಮಾದಲ್ಲಿ ಸಂಜನಾ ನಾಯಕಿಯಾಗಿದ್ದಾರೆ, ಜೊತೆಗೆ ಶೋಕಿವಾಲ್ ಸಿನಮಾದಲ್ಲಿ ಅಜಯ್ ರಾವ್ ಜತೆ ನಟಿಸುತ್ತಿದ್ದಾರೆ, ಇನ್ನೂ ಅಮೃತಾ ಅಯ್ಯಂಗಾರ್ ಸೂರಿಯ ಪಾಪ್ ಕಾರ್ನ್ ಮಂಕಿ ಟೈಗರ್ ನಲ್ಲಿ ಹಾಗೂ ಕೃಷ್ಣ ಮತ್ತು ಶಿವಾರ್ಜುನ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಇದೊಂದು ಮರ್ಡರ್ ಮಿಸ್ಟ್ರಿ ಕಥೆಯಾಗಿದ್ದು, ಬಹುತೇಕ ಚಿತ್ರದ ಕಥೆ ಸಾಗರದಲ್ಲಿ ನಡೆಯುತ್ತಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಬಹುತೇಕ ಮುಗಿಯುವ ಹಂತಕ್ಕೆ ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.