ನಟ ವಿಶಾಲ್ 
ಸಿನಿಮಾ ಸುದ್ದಿ

ತಮಿಳು ನಟ ವಿಶಾಲ್‌ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು

ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಚೆನ್ನೈ‌: ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಹೌದು..  ವಿಶಾಲ್ ಹೀರೋ ಮಾತ್ರವಲ್ಲ, ನಿರ್ಮಾಪಕರೂ ಹೌದು. ವಿಶಾಲ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಲ್ಲಿ ಹಲವು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ವಿಶಾಲ್ ಅವರ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಕಳೆದ ಆರು ವರ್ಷಗಳಲ್ಲಿ 45 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ.  ಈ ಬಗ್ಗೆ ವಿಶಾಲ್‌ ಅವರ ಮ್ಯಾನೇಜರ್ ಹರಿ ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಪೊಲೀಸರು ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ನಟ ವಿಶಾಲ್ ಕಳೆದ ಏಳು ವರ್ಷಗಳಿಂದ ಎಂಟು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ಸದ್ಯ ವಿಶಾಲ್ ಚಕ್ರ ಈ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಟೀಸರ್ ಬಿಡುಗಡೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್