ಧ್ರುವ ಸರ್ಜಾ ದಂಪತಿ 
ಸಿನಿಮಾ ಸುದ್ದಿ

ಕೋವಿಡ್ 19: ಧ್ರುವ ಸರ್ಜಾ ದಂಪತಿಗೆ ಹೋಂ ಕ್ವಾರಂಟೈನ್

ಕೋವಿಡ್ ಸೋಂಕಿಗೆ ಒಳಗಾಗಿದ್ದ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್ ಸೋಂಕಿಗೆ ಒಳಗಾಗಿದ್ದ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.

"ಕೋವಿಡ್ ಪರೀಕ್ಷಾ ಫಲಿತಾಂಶ ಪಾಸಿಟಿವ್ ಆಗಿದ್ದು, ಸ್ವತಃ ಆಸ್ಪತ್ರೆಗೆ ಹೋಗಿದ್ದೇವೆ, ನಮ್ಮ ಸಂಪರ್ಕಕ್ಕೆ ಬಂದವರೂ ಪರೀಕ್ಷೆಗೆ ಒಳಗಾಗಿ" ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು. 

ಇದೀಗ ವೈದ್ಯರ ಸಲಹೆ ಮೇರೆಗೆ ಧ್ರುವ ಸರ್ಜಾ ದಂಪತಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಹೋಂ ಕ್ವಾರಂಟೈನ್ ಆಗಿದ್ದಾರೆ. ಅಲ್ಲದೆ ಅಗತ್ಯ ಚಿಕಿತ್ಸೆಗಳನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಪಡೆಯಲಿದ್ದಾರೆ. 

ಇದಾಗಿ ಸ್ಟಾರ್ ದಂಪತಿಗಳಿಗೆ ಸೋಂಕು ತಗುಲಿದ್ದು ಹೇಗೆಂದು ಇನ್ನೂ ಖಾತ್ರಿಯಾಗಿಲ್ಲ.  ಆದರೆ ಅಣ್ಣನ ಸಾವಿನ ನಂತರ ಖಿನ್ನತೆಗೆ ಒಳಗಾಗಿ ಲೋ ಬಿಪಿ ಹೊಂದಿದ್ದ ಧ್ರುವ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆ ಸೇರಿದ್ದರು. ಈ ನಡುವೆ ಕೊರೋನಾ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಧ್ರುವ, ಪ್ರೇರಣಾ ಸಂಪರ್ಕಕ್ಕೆ ಬಂದ ಅವರ ಕುಟುಂಬ ಸದಸ್ಯರೂ ಸಹ ತಾವು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ