ಸಿನಿಮಾ ಸುದ್ದಿ

ನಟ ಚಿರಂಜೀವಿ ಸರ್ಜಾ ವಿಧಿವಶ

Vishwanath S

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಚಿರಂಜೀವಿ ಸರ್ಜಾಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಿದ್ರೆಯಲ್ಲಿ ಉಸಿರಾಡಲು ಕಷ್ಟಪಡುತ್ತಿದ್ದರು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ವೈದ್ಯರನ್ನು ಸಂಪರ್ಕಿಸಿದ್ದರು. 

ಇಂದು ಮಧ್ಯಾಹ್ನ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಅವರನ್ನು 2.18ರ ಸುಮಾರಿಗೆ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ 3.48ರ ಸುಮಾರಿಗೆ ಚಿರಂಜೀವಿ ಸರ್ಜಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. 

1980 ರಂದು ಆಕ್ಟೋಬರ್​ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು, ಹಿರಿಯ ನಟ ಶಕ್ತಿ ಪ್ರಸಾದ್ ಅವರ​ ಮೊಮ್ಮಗ ಮತ್ತು ನಟ ಅರ್ಜುನ್​ ಸರ್ಜಾ ಅಳಿಯ. ಬಾಲ್ಡವಿನ್​ ಬಾಲಕರ ಹೈ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ  ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಅಲ್ಲದೇ 4 ವರ್ಷ ಅರ್ಜುನ್​ ಸರ್ಜಾ ಜೊತೆ ಸಹ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದರು.

ವಾಯುಪುತ್ರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಚಿರಂಜೀವಿ ಸರ್ಜಾ ಅವರು 22ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿರಂಜೀವಿ ಸರ್ಜಾ ಅಭಿನಯದ ಚಿತ್ರಗಳು
ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಶಲ್, ಚಂದ್ರಲೇಖ, ಅಜಿತ್​, 
ರುದ್ರತಾಂಡವ, ಆಟಗಾರ, ರಾಮ್​ಲೀಲಾ, ಆಕೆ, ಭರ್ಜರಿ, ಪ್ರೇಮ ಬರಹ, ಸಂಹಾರ, ಅಮ್ಮ ಐ ಲವ್​ ಯೂ, 
ಸಿಂಗ, ಖಾಕಿ, ಆದ್ಯಾ, ಶಿವಾರ್ಜುನ, ರಾಜಮಾರ್ತಾಂಡ, ಏಪ್ರಿಲ್​, ರಣಂ, ಕ್ಷತ್ರಿಯಾ ಸಿನಿಮಾಗಳು ಶೂಟಿಂಗ್​ ಹಂತದಲ್ಲಿದೆ.

2018ರಲ್ಲಿ ನಟಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

SCROLL FOR NEXT