ಸುಶಾಂತ್ ಸಿಂಗ್ 
ಸಿನಿಮಾ ಸುದ್ದಿ

ಸುಶಾಂತ್ ಸಿಂಗ್ ಜೊತೆಗಿನ ಒಪ್ಪಂದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ಸಲ್ಲಿಸಿದ ಯಶ್ ರಾಜ್ ಫಿಲ್ಮ್ಸ್ 

ಯಶ್ ರಾಜ್ ಫಿಲ್ಮ್ಸ್ (ವೈಆರ್ ಎಫ್) ಜೂ.20 ರಂದು, ಮೃತ ಸುಶಾಂತ್ ಸಿಂಗ್ ಜೊತೆಗಿನ ಮುಂದಿನ ಚಿತ್ರಗಳಿಗಾಗಿ ನಡೆದಿದ್ದ ತನ್ನ ಒಪ್ಪಂದದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ಸಲ್ಲಿಸಿದೆ. 

ಯಶ್ ರಾಜ್ ಫಿಲ್ಮ್ಸ್ (ವೈಆರ್ ಎಫ್) ಜೂ.20 ರಂದು, ಮೃತ ಸುಶಾಂತ್ ಸಿಂಗ್ ಜೊತೆಗಿನ ಮುಂದಿನ ಚಿತ್ರಗಳಿಗಾಗಿ ನಡೆದಿದ್ದ ತನ್ನ ಒಪ್ಪಂದದ ಪ್ರತಿಗಳನ್ನು ಮುಂಬೈ ಪೊಲೀಸರಿಗೆ ಸಲ್ಲಿಸಿದೆ. 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ಭಾನುವಾರ ಬಾಂದ್ರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದರು.

ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ಯಾವುದೇ ಪತ್ರ ದೊರೆತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಬಳಿಕ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು, ಸಿನಿಮಾ ಒಪ್ಪಂದದ ಕುರಿತು ಮಾಹಿತಿ ಹಂಚಿಕೊಳ್ಳುವಂತೆ ಯಶ್ ರಾಜ್ ಫಿಲ್ಮ್ಸ್ ಗೆ ಜೂ.18 ರಂದು ಸೂಚನೆ ನೀಡಿದ್ದರು.

ತನಿಖಾಧಿಕಾರಿಗೆ ಸುಶಾಂತ್ ಸಿಂಗ್ ರಜಪೂತ್ ಸಹಿ ಮಾಡಿರುವ ಒಪ್ಪಂದದ ಪತ್ರ ವೈಆರ್ ಎಫ್ ನಿಂದ ಲಭ್ಯವಾಗಿದೆ ಎಂದು ಅಭಿಷೇಕ್ ತ್ರಿಮುಖೆ, ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಝೋನ್-IX ಹೇಳಿದ್ದಾರೆ. ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸುಶಾಂತ್ ಕುಟುಂಬ ಸದಸ್ಯರು, ಸುಶಾಂತ್ ನ ಆಪ್ತ ಗೆಳತಿ ರೆಹಾ ಚಕ್ರವರ್ತಿ, ಕಾಸ್ಟಿಂಗ್ ಡೈರೆಕ್ಟರ್ ಮುಖೇಶ್ ಛಬ್ರಾ ಸೇರಿದಂತೆ ಈ ವರೆಗೂ 15 ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಅವರು ನೀಡಿರುವ ಮಾಹಿತಿಯ ಆಧಾರದಲ್ಲಿ ವಾಸ್ತವಾಂಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಡಿಸಿಪಿ ಹೇಳಿದ್ದಾರೆ.

ಚಕ್ರವರ್ತಿ ನೀಡಿರುವ ಮಾಹಿತಿಯ ಪ್ರಕಾರ, ಯಶ್ ರಾಜ್ ಫಿಲ್ಮ್ಸ್ ಜೊತೆಗೆ ನಟ ಸುಶಾಂತ್ ಒಪ್ಪಂದಗಳನ್ನು ರದ್ದುಪಡಿಸಿ ಆಕೆಗೂ ಯಶ್ ರಾಜ್ ಬ್ಯಾನರ್ ನಡಿಯಲ್ಲಿ ಕೆಲಸ ಮಾಡದಂತೆ ಹೇಳಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT