'ಲಾ' ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಕನ್ನಡದ 'ಲಾ' ಚಿತ್ರ ಜುಲೈ 17 ರಂದು ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ನೇರ ಬಿಡುಗಡೆ!

ಬಹುನಿರೀಕ್ಷಿತ ಕನ್ನಡ ಚಿತ್ರ 'ಲಾ' ಈಗ ಜುಲೈ 17 ರಂದು ಅಮೆಜಾನ್ ಪ್ರೈಮ್ ನಲ್ಲಿ ಪ್ರಥಮವಾಗಿ ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಇಂದು ಪ್ರಕಟಿಸಿದೆ. 

ಬಹುನಿರೀಕ್ಷಿತ ಕನ್ನಡ ಚಿತ್ರ 'ಲಾ' ಈಗ ಜುಲೈ 17 ರಂದು ಅಮೆಜಾನ್ ಪ್ರೈಮ್ ನಲ್ಲಿ ಪ್ರಥಮವಾಗಿ ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಇಂದು ಪ್ರಕಟಿಸಿದೆ. 

ಕ್ರೈಮ್-ಥ್ರಿಲ್ಲರ್ ಕಥೆ ಹೊಂದಿರುವ ಈ ಚಿತ್ರ, ಭೀಕರ ಅಪರಾಧದ ವಿರುದ್ಧ ನ್ಯಾಯಕ್ಕಾಗಿ ಹೋರಾಡಲು ನಂದಿನಿ ಅನುಸರಿಸಿದ ಮಾರ್ಗವನ್ನು ಬಿಂಬಿಸುತ್ತದೆ. ನಟಿ ರಾಗಿಣಿ ಪ್ರಜ್ವಲ್ ಈ ಪಾತ್ರವನ್ನು ನಿರ್ವಹಿಸಿದ್ದಾರೆ.

ತನ್ನ ಮಾರ್ಗದರ್ಶಕರ ಸಹಾಯದಿಂದ ಕಾನೂನು ವ್ಯವಸ್ಥೆಯ ವಿರುದ್ಧ ಹೋರಾಡುವ ಈ ಚಲನಚಿತ್ರವು ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಪರಾಧದ ವಿರುದ್ಧ ಧ್ವನಿ ಎತ್ತುತ್ತದೆ. 

'ಲಾ' ಚಿತ್ರವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್, ಎಂ ಗೋವಿಂದ ನಿರ್ಮಿಸಿದ್ದಾರೆ ಮತ್ತು ರಘು ಸಮರ್ತ್ ನಿರ್ದೇಶಿಸಿದ್ದಾರೆ. 

'ಲಾ' ಕನ್ನಡ ಚಿತ್ರದ ಪ್ರಮುಖ ಪಾತ್ರವನ್ನು ರಾಗಿಣಿ ಪ್ರಜ್ವಾಲ್ ಕಾಣಿಸಿಕೊಂಡಿದ್ದಾರೆ, ಅವರು ಪ್ರಮುಖ ನಟಿಯಾಗಿ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರ ಇದಾಗಿದೆ. ಇವರ ಜೊತೆಗೆ ಮುಖಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ ಇತರರು ನಟಿಸಿದ್ದಾರೆ. ಈ ಚಿತ್ರದಲ್ಲಿ ಸಿರಿ ಪ್ರಹ್ಲಾದ್ ಮತ್ತು ಹಿರಿಯ ನಟ ಮುಖಮಂತ್ರಿ ಚಂದ್ರು ಪ್ರಮುಖ ಪಾತ್ರಗಳಲ್ಲಿದ್ದಾರೆ. 

ಸ್ಯಾಂಡಲ್ ವುಡ್ ಉದ್ಯಮದಿಂದ ಡಿಜಿಟಲ್ ಬಿಡುಗಡೆಯಾದ ಮೊದಲ ಚಿತ್ರ 'ಲಾ'. ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನ ಈ ಚಿತ್ರವು ಜುಲೈ 17, 2020 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ವಿಶ್ವದಾದ್ಯಂತ 200 ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT