ಸುದೀಪ್ ಮತ್ತು ಶ್ರದ್ಧಾ ಶ್ರೀನಾಥ್ 
ಸಿನಿಮಾ ಸುದ್ದಿ

ಫ್ಯಾಂಟಮ್ ನಲ್ಲಿ ಸುದೀಪ್ ಗೆ ನಾಯಕಿಯಾಗಲಿದ್ದಾರೆ ಶ್ರದ್ಧಾ ಶ್ರೀನಾಥ್?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್ ನ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್ ನ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. 

ಅನೂಪ್ ಭಂಡಾರಿ ಹುಟ್ಟುಹಬ್ಬದ ದಿನವೆ ಚಿತ್ರೀಕರಣ ಪ್ರಾರಂಭವಾಗಿದ್ದು, ಹೈದರಾಬಾದ್ ನಲ್ಲಿ ಮೊದಲ ಶೆಡ್ಯೂಲ್ ಪ್ರಾರಂಭವಾಗಿದೆ. ಈಗಾಗಲೆ ಫ್ಯಾಂಟಮ್ ಸಿನಿಮಾದ ಸುದೀಪ್ ಲುಕ್ ಶೇರ್ ಮಾಡಲಾಗಿದ್ದು

ಸುದೀಪ್ ಜೊತೆ ಕನ್ನಡದ ನಟಿ ಶ್ರದ್ಧ್ ಶ್ರೀನಾಥ್ ರೋಮ್ಯಾನ್ಸ್ ಮಾಡಲಿದ್ದಾರೆ  ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಚಿತ್ರತಂಡ ಈಗಾಗಲೆ ಶ್ರದ್ಧಾ ಜೊತೆ ಮಾತುಕತೆ ನಡೆಸಿದಿದ್ದು, ಶ್ರದ್ಧಾ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ. 

ಫ್ಯಾಂಟಮ್ ಮೂಲಕ ನಟಿ ಶ್ರದ್ಧಾ ಶ್ರೀನಾಥ್ ಮೊದಲ ಬಾರಿಗೆ ಕಿಚ್ಚ ಸುದೀಪ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಯು ಟರ್ನ್ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದ ಶ್ರದ್ಧಾ ಕೊನೆಯದಾಗಿ ಶಿವರಾಜ್ ಕುಮಾರ್ ಜೊತೆ ರುಸ್ತುಂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. 

ಆ ನಂತರ ಈಗ ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.  ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಪರಭಾಷೆಯಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು, ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಶ್ರದ್ಧಾ ತಮಿಳಿನ ಮಾರ, ತೆಲುಗಿನ ಕೃಷ್ಣ ಅಂಡ್ ಹಿಸ್ ಲೀಲಾ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. 

ಇನ್ನು ಕನ್ನಡದಲ್ಲಿ ಗೋದ್ರ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಜೊತೆಗೆ ರಿಷಭ್ ಶೆಟ್ಟಿ ಅಭಿನಯದ ರುದ್ರಪ್ರಯಾಗ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಸುದೀಪ್ ಗೆ ನಾಯಕಿಯಾಗಿ ತೆಲುಗಿನ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ವೈರಲ್ ಆಗಿತ್ತು. ಸಮಂತಾ ಜೊತೆ ಈಗಾಗಲೆ ಮಾತುಕತೆ ನಡೆಸಲಾಗಿದ್ದು, ಗ್ರೀನ್ ಸಿಗ್ನಲ್ ಒಂದೆ ಭಾಕಿ ಇದೆ ಎಂದು ಹೇಳಲಾಗಿತ್ತು. 

ಆದರೀಗ ಸಮಂತಾ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.  ಫ್ಯಾಂಟಮ್ ಸಿನಿಮಾದಲ್ಲಿ ಸುದೂಪ್ ವಿಕ್ರಾಂತ್ ರೋಣಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ಕೂಡ ನಟಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT