ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರು: ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.
ಗ್ಯಾಸ್ಟ್ರಿಕ್ ಪರಿಣಾಮ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್, ಒಂದು ದಿನದ ಮಟ್ಟಿಗೆ ಆಸ್ಪತ್ರೆಗೆ ಸೇರಿದ್ದಾರೆ.
ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಚಿತ್ರೀಕರಣ ಇನ್ನೂ ನಡೆಯುತ್ತಿದೆ. ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ವಿದೇಶಕ್ಕೆ ತೆರಳಬೇಕಿತ್ತು. ಆದರೆ, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದೇಶಿ ಪ್ರವಾಸವನ್ನು ಚಿತ್ರತಂಡ ಕೈಬಿಟ್ಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.