'ರಾಬರ್ಟ್' ಜೊತೆಯಲ್ಲಿರುವ ಈ ಪುಟ್ಟ ಬಾಲಕ ಯಾರು? 
ಸಿನಿಮಾ ಸುದ್ದಿ

'ರಾಬರ್ಟ್' ಜೊತೆಯಲ್ಲಿರುವ ಈ ಪುಟ್ಟ ಬಾಲಕ ಯಾರು? 

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನಯೆ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದರೆ, ದರ್ಶನ್ ಹೆಗಲ ಮೇಲೆ ಪುಟ್ಟ ಬಾಲಕನೊಬ್ಬ ಕುಳಿತಿದ್ದು, ಈ ಬಾಲಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡತೊಡಗಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನಯೆ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದರೆ, ದರ್ಶನ್ ಹೆಗಲ ಮೇಲೆ ಪುಟ್ಟ ಬಾಲಕನೊಬ್ಬ ಕುಳಿತಿದ್ದು, ಈ ಬಾಲಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡತೊಡಗಿದೆ. 

ಮೊದಲು ಟೀಸರ್ ಬಳಿಕ ಬಾ ರೆಡಿ... ನಂತರ ಜೈ ಶ್ರೀರಾಮ್ ಗೀತೆಗಳನ್ನು ಬಿಡುಗಡೆ ಮಾಡಿದ್ದ ರಾಬರ್ಟ್ ಚಿತ್ರ ತಂಡ ಮಾರ್ಚ್.21 ರಂದು ದೋಸ್ತಾ ಕಣೋ ಎಂಬ ಹಾಡನ್ನು ಬಿಡುಗಡೆ ಮಾಡಲಿದೆ. ಈ ಹಾಡಲನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇವರೊಂದಿಗೆ ಹೇಮಂತ್ ಕೂಡ ದ್ವನಿಗೂಡಿಸಿದ್ದಾರೆ. ಜೈ ಶ್ರೀರಾಮ್ ಹಾಡಿನಲ್ಲಿ ದರ್ಶನ್ ಜೊತೆಗೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದು, ಬಾಲಕನನ್ನು ನಿರ್ದೇಶಕ ತರುಣ್ ಸುಧೀರ್ ಅವರು ಪರಿಚಯ ಮಾಡಿಕೊಟ್ಟಿದ್ದಾರೆ. 

ದರ್ಶನ್ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಜೇಸನ್ ಡಿ'ಸೋಜಾ. ತುಂಬಾ ಪ್ರತಿಭಾವಂತ ಬಾಲಕನಾಗಿದ್ದು, ರಾಬರ್ಟ್ ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆಂದು ನಿರ್ದೇಶಕರು ಹೇಳಿದ್ದಾರೆ. 

ಜೇಸನ್ ಮೂಲತಃ ಮುಂಬೈ ಮೂಲದ ಬಾಲಕನಾಗಿದ್ದು, 10 ವರ್ಷದ ಈ ಪೋರ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾನೆ. ಅಲ್ಲಗೆ, ಈಗಾಗಲೇ ಹಲವಾರು ಬಾಲಿವುಡ್ ಸಿನಿಮಾಗಳಲ್ಲಿ ಬಣ್ಣ ಕೂಡ ಹಚ್ಚಿದ್ದಾನೆ. 

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ್ದಾನೆ. ಇದೀಗ ಇದೇ ಮೊದಲ ಬಾರಿಗೆ ಸೌತ್ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಈಗಾಗಲೇ ರಾಬರ್ಟ್ ಚಿತ್ರದ ಪೋಸ್ಟರ್ ಬಾಲಕನನ್ನು ದೊಡ್ಡ ಪಟ್ಟಕ್ಕೇರಿಸಿದೆ. 

ಇನ್ನು ರಾಬರ್ಟ್ ಚಿತ್ರದಲ್ಲಿ ದರ್ಶನ್ ಅವರು ಮೂರು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಂದು ಪಾತ್ರ ಸಂಜಯ್, ಇನ್ನೊಂದು ಅಕ್ಬರ್ ಹಾಗೂ ಮತ್ತೊಂದು ರಾಬರ್ಟ್ ರೌದ್ರವತಾರ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ