ಸಿನಿಮಾ ಸುದ್ದಿ

ಮಾರಕ ಕೊರೋನಾ: ಭಾರತೀಯರಿಗೆ ಡಿ ಬಾಸ್ ಕಳಕಳಿಯ ಮನವಿ

Raghavendra Adiga

ದೇಶಾದ್ಯಂತ ವ್ಯಾಪಿಸಿರುವ ಮಾರಕ ಕೊರೋನಾವೈರಸ್ ಗೆ ಭಾರತದಲ್ಲಿ ಇದುವರೆಗೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನಾಲ್ಕು ನೂರಕ್ಕೆ ಹೆಚ್ಚು ಮಂದಿ ಸೋಂಕಿತರಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಮಾರ್ಚ್ ಅಂತ್ಯದವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದೆ. ಈ ಸಮಯದಲ್ಲಿ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ದೇಶದ ಜನತೆಗೆ ಕರೋನಾವೈರಸ್ ನಿಂದ ಜಾಗೃತವಾಗಿರಿ ಎಂದು ಮನವಿ ಮಾಡಿದ್ದಾರೆ.

ಫೇಸ್ ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ದರ್ಶನ್ ಕೊರೋನಾ ವಿರುದ್ಧ ಹೋರಾಡುವ ಸರ್ಕಾರ, ಪೋಲೀಸ್ ಸಿಬ್ಬಂದಿ, ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಫೇಸ್ ಬುಕ್ ಬರಹದ ಪೂರ್ಣ ಪಾಠ ಹೀಗಿದೆ

"ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.'Common sense is not common' ಎನ್ನುವ ಹಾಗೆ ಮಾಡಬೇಡಿ."

Please behave like a responsible citizen of the country.

ನಿಮ್ಮ ದಾಸ ದರ್ಶನ್

SCROLL FOR NEXT