ಕನಿಕಾ 
ಸಿನಿಮಾ ಸುದ್ದಿ

5ನೇ ಬಾರಿಯೂ ಗಾಯಕಿ ಕನಿಕಾ ಕಪೂರ್ ಕರೋನಾ ವೈರಸ್ ಟೆಸ್ಟ್ ಪಾಸಿಟಿವ್, ಆರೋಗ್ಯ ಸ್ಥಿರ ಎಂದ ವೈದ್ಯರು

ಬಾಲಿವುಡ್ ಗಾಯಕಿ ಕನಿಕಾ ಕಪೂರ್'ಗೆ 5ನೇ  ಬಾರಿಯೂ ಕೊರೋನಾ ವೈರಸ್ ಪರೀಕ್ಷೆ ಮಾಡಲಾಗಿದ್ದು, ಇನ್ನೂ ಅವರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಲಖನೌ: ಬಾಲಿವುಡ್ ಗಾಯಕಿ ಕನಿಕಾ ಕಪೂರ್'ಗೆ 5ನೇ  ಬಾರಿಯೂ ಕೊರೋನಾ ವೈರಸ್ ಪರೀಕ್ಷೆ ಮಾಡಲಾಗಿದ್ದು, ಇನ್ನೂ ಅವರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಪ್ರತೀ 48 ಗಂಟೆಗಳಿಗೊಮ್ಮೆ ಕನಿಕಾ ಕಪೂರ್ ಅವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು , ಈಗಲೂ ಅವರಲ್ಲಿ ವೈರಸ್ ದೃಢವಾಗಿದೆ  ಎಂದು ಹೇಳಲಾಗುತ್ತಿದೆ. 

ಪ್ರಸ್ತುತ ಕನಿಕಾ ಕಪೂರ್ ಅವರು, ಸಂಜಯ್ ಗಾಂಧಿ ಪೋಸ್ಟ್ ಗ್ರಾಡ್ಜುಯೇಟ್ ಇಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕನಿಕಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಈ ಹಿನ್ನೆಲೆಯಲ್ಲಿ ವದಂತಿಗಳನ್ನು ತಿರಸ್ಕರಿಸಿರುವ ಆಸ್ಪತ್ರೆಯ ವೈದ್ಯರು, ಕನಿಕಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಂತೆಪಡುವ ಅಗತ್ಯಗಳಿಲ್ಲ ಎಂದು ಹೇಳಿದ್ದಾರೆ. 

ಮಾರ್ಚ್ 20ರಂದು ತಮಗೆ ಕೊರೋನಾ ವೈರಸ್ ಇರುವುದಾಗಿ ಕನಿಕಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಕನಿಕಾ ಅವರ ಈ ಹೇಳಿಕೆ ರಾಜಕೀಯ ವಲಯದ ಘಟಾನುಘಟಿಗಳ ಎದೆ ನಡುಗುವಂತೆ ಮಾಡಿತ್ತು. ಏಕೆಂದರೆ, ಕನಿಕಾ ಅವರು ತಮಗೆ ವೈರಸ್ ಇದೆ ಎಂದು ಹೇಳಿದ ಹಿಂದಿನ ದಿನವಷ್ಟೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಹಲವಾರು ರಾಜಕಾರಣಿಗಲು, ಉದ್ಯಮಿಗಲು ಹಾಗೂ ವರಿಷ್ಠರು ಭಾಗಿಯಾಗಿದ್ದರು. ಪ್ರಕರಣ ಸಂಬಂಧ ನಿರ್ಲಕ್ಷ್ಯ ವಹಿಸಿದ್ದ ಕಾರಣ ಕನಿಕಾ ವಿರುದ್ಧ ಹಝರತ್ ಗಂಜ್ ಹಾಗೂ ಗೋಮ್ಟಿ ನಗರ್ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT