ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಜಿಮ್ ತೆರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿದ ಸಿಎಂಗೆ ನಟ ವಿಜಯ್ ಅಭಿನಂದನೆ!

ಜಿಮ್ ಟ್ರೈನರ್ ಗಳಿಗೆ ಹಾಗೂ ಜಿಮ್ ಗಳನ್ನು ತೆರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ಜಿಮ್ ಟ್ರೈನರ್ ಗಳಿಗೆ ಹಾಗೂ ಜಿಮ್ ಗಳನ್ನು ತೆರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಿಮ್​ನಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ರೈನರ್​ಗಳಿಗೆ ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು ಜೀವನ ನಡೆಸಲೂ ಕಷ್ಟಸಾಧ್ಯವಾಗಿದೆ. ಜಿಮ್​ಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ಸಕರಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿರುವುದಕ್ಕೆ ದುನಿಯಾ ವಿಜಯ್ ಅವರು ಸಿಎಂಗೆ ಟ್ವೀಟರ್ ನಲ್ಲಿ  ಧನ್ಯವಾದಗಳನ್ನು ತಿಳಿಸಿದ್ದಾರೆ.​ ಮೇ 18ರಂದು ಜಿಮ್ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್​ ಪ್ರಸರಣ ತಡೆಯಲು ಘೋಷಿಸಿರುವ ಲಾಕ್​ಡೌನ್​ನಿಂದಾಗಿ ಎಲ್ಲಾ ವ್ಯಾಪಾರ ವಹಿವಾಟು ಬಂದಾ ಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ವ್ಯಾಪಾರಸ್ಥರಿಗೆ, ಕೂಲಿ ಕಾರ್ಮಿಕರಿಗೆ, ಜಿಮ್​ ಟ್ರೈನರ್​​ಗಳಿಗೆ ಹೀಗೆ ಇತ್ಯಾದಿ ಕ್ಷೇತ್ರ ಗಳ ಕಾರ್ಮಿಕರು ಜೀವನ ನಡೆಸಲು ಸಾಕಷ್ಟು ಕಷ್ಟಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಮೇ 17ರ ಬಳಿಕ ಲಾಕ್ ಡೌನ್ ಸಡಿಲಿಕೆ ವೇಳೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!