ರಾಬರ್ಟ್ 
ಸಿನಿಮಾ ಸುದ್ದಿ

'ರಾಬರ್ಟ್' ಚಿತ್ರ ಬಿಡುಗಡೆಗಿನ್ನೂ ದಿನಾಂಕ ನಿಗದಿಯಾಗಿಲ್ಲ: ತರುಣ್ ಕಿಶೋರ್ ಸುಧೀರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ  ಚಿತ್ರೀಕರಣ ಪೂರ್ಣಗೊಂಡಿದ್ದು, ಇದೀಗ ಚಿತ್ರದ ತಂಡ ರಂಜಾನ್ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವಲ್ಲೇ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಚಿತ್ರ ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ  ಚಿತ್ರೀಕರಣ ಪೂರ್ಣಗೊಂಡಿದ್ದು, ಇದೀಗ ಚಿತ್ರದ ತಂಡ ರಂಜಾನ್ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವಲ್ಲೇ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಚಿತ್ರ ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. 

ಮೇ. 24ರಂದು ದೇಶದಾದ್ಯಂತ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಹಬ್ಬದ ಪ್ರಯುಕ್ತ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡುತ್ತೇವೆಂದು ಚಿತ್ರದ ನಿರ್ದೇಶದ ತರುಣ್ ಸುಧೀರ್ ಹೇಳಿದ್ದಾರೆ. 

ಈ ವಿಚಾರ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಆಗಲೇ #RoberrtNewPosterOnRamadan ಎಂದು ಹ್ಯಾಷ್ ಟ್ಯಾಗ್ ಮೂಲಕ ಟ್ವಿಟರ್ ನಲ್ಲಿ ಟ್ರೆಂಡಿಂಗ್ ಮಾಡುತ್ತಿದ್ದಾರೆ. 

ರಾಬರ್ಟ್ ಚಿತ್ರ ಭಾರೀ ನಿರೀಕ್ಷೆಗಲನ್ನು ಮೂಡಿಸಿದ್ದು, ಈಗಾಗಲೇ ಚಿತ್ರ ದಂಡ ಪ್ರತೀ ಹಬ್ಬದ ಸಂಭ್ರಮಗಳಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಲೇ ಬಂದಿದೆ. ಕ್ರಿಸ್ ಮಸ್, ಸಂಕ್ರಾಂತಿ, ಯುಗಾದಿ, ಶ್ರೀರಾಮನವಮಿ, ಕಾರ್ಮಿಕರ ದಿನ ಹೀಗೆ ಒಂದೊಂದಿ ದಿನ ಚಿತ್ರದ ಕುರಿತ ಒಂದೊಂದು ಅಂಶಗಳನ್ನು ಚಿತ್ರತಂಡ ತಿಳಿಸಿದೆ. ಪೋಸ್ಟರ್, ಮೋಷನ್ ಮೋಸ್ಟರ್, ಫಸ್ಟ್ ಲುಕ್, ಟೀಸರ್, ಮೇಕಿಂಗ್ ವಿಡಿಯೋಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚು ಮಾಡುತ್ತದೆ. ಇದೀಗ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿರುವುದು ಅಭಿಮಾನಗಳಲ್ಲಿನ ಕಾತರವನ್ನು ಮತ್ತಷ್ಟು ಹೆಚ್ಚು ಮಾಡಿದೆ. 

ಚಿತ್ರಮಂದಿರಗಳು ಯಾವಾಗ ತೆರೆಯುತ್ತವೆ ಎಂಬುದರ ಬಗ್ಗೆ ನಮಗೂ ಮಾಹಿತಿಯಿಲ್ಲ. ಎರಡನೆಯದಾಗಿ ಜನರ ಜೀವನ ಎಂದಿನಂತೆ ಸಾಮಾನ್ಯವಾಗಬೇಕು. ಆಗಷ್ಟೇ ಅವರು ಚಿತ್ರಮಂದಿರಗಳಿಗೆ ಬರಲು ಸಾಧ್ಯ. ಎಲ್ಲಾ ಬೆಳವಣಿಗೆಗಳ ಬಳಿಕವಷ್ಟ ನಾವು ಚಿತ್ರ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಲುತ್ತೇವೆಂದು ತರುಣ್ ತಿಳಿಸಿದ್ದಾರೆ. 

ಈಗಾಗಲೇ ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆ ಮಾಡುವಂತೆ ಸಾಕಷ್ಟು ಬೇಡಿಕೆಗಳು ಬರುತ್ತಿದೆ. ಆದರೆ, ಚಿತ್ರ ತಂಡ ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ. ರಾಬರ್ಟ್ ಒಂದು ಸಿನಿಮಾವಾಗಿದ್ದು, ಅದನ್ನು ಸಂಭ್ರಮಿಸಬೇಕು. ಪ್ರೇಕ್ಷಕರು ಕೊರೋನಾ ಭೀತಿಯಿಂದ ಹೊರಬರುವವರೆಗೂ ನಾವು ಕಾಯುತ್ತೇವೆ. ನಂತರ ಅವರು ತಮ್ಮ ಕುಟುಂಬದೊಂದಿಗೆ ಸಿನಿಮಾ ನೋಡಿ ಖುಷಿಪಡುವುದನ್ನು ನಾವು ನೋಡಬಯಸುತ್ತಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ