ಚಿರಂಜೀವಿ 
ಸಿನಿಮಾ ಸುದ್ದಿ

ಮೆಗಾಸ್ಟಾರ್ ಚಿರುಗೆ ಕೊರೊನಾ ಸೋಂಕು ತಗಲಿಯೇ ಇಲ್ಲ; ದೋಷಪೂರಿತ ಆರ್‌ಟಿಪಿಸಿಆರ್ ಕಿಟ್‌ನಿಂದ ಅವಾಂತರ..!

ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ನಿಜಕ್ಕೂ ಇದು ಸಿಹಿ ಸುದ್ದಿ. ತಮಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಚಿರಂಜೀವಿ ಖುದ್ದು ಟ್ವೀಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ನಿಜಕ್ಕೂ ಇದು ಸಿಹಿ ಸುದ್ದಿ. ತಮಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಚಿರಂಜೀವಿ ಖುದ್ದು ಟ್ವೀಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.   

ಆರ್‌ಟಿ ಪಿಸಿಆರ್ ಕಿಟ್‌ ನ ದೋಷದಿಂದಾಗಿ ತಪ್ಪಾಗಿ ತಮಗೆ ಕೋವಿಡ್-19 ಸೋಂಕು ತಗುಲಿದೆ ಎಂದು ನಿರ್ಧರಿಸಲಾಗಿತ್ತು ಎಂದು ಅವರು  ಸ್ಪಷ್ಟಪಡಿಸಿದ್ದಾರೆ.

ತಮಗೆ, ಯಾವುದೇ ರೋಗ ಲಕ್ಷಣಗಳು ಇಲ್ಲದ  ಕಾರಣ, ಅನುಮಾನ ಬಂದು ಅಪೋಲೋ ವೈದ್ಯರ ತಂಡವನ್ನು ಸಂಪರ್ಕಿಸಿದ್ದಾಗಿ ಎಂದು ಚಿರಂಜೀವಿ ಹೇಳಿದ್ದಾರೆ. ಅವರು ನಡೆಸಿದ ಸಿಟಿ ಸ್ಕ್ಯಾನ್‌ನಲ್ಲಿ ನೆಗೆಟಿವ್ ವರದಿ ಬಂದಿದೆ. ಅಂತಿಮವಾಗಿ ತಮಗೆ ಪಾಸಿಟಿವ್ ವರದಿ ಬಂದಿದ್ದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಿಸಿದರೂ ಸಹ ನೆಗೆಟಿವ್ ವರದಿ ಬಂದಿದೆ ಎಂದು ಅವರು ಟ್ವೀಟ್ ನಲ್ಲಿ ವಿವರಿಸಿದ್ದಾರೆ.

ಈ ಮೂರು ವರದಿಗಳ ನಂತರ, ವೈದ್ಯರು ತಮಗೆ ಕೊರೊನಾ ಸೋಂಕು ತಗುಲಿಯೇ ಇಲ್ಲ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯ ಚಿರು ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ಸಂದರ್ಭದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಲ್ಲ ಅಭಿಮಾನಿಗಳಿಗೆ  ಚಿರಂಜೀವಿ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!