ನಟ ಚಿರಂಜೀವಿ ಸರ್ಜಾ ಮಗುವಿನ ತೊಟ್ಟಿಲ ಶಾಸ್ತ್ರ 
ಸಿನಿಮಾ ಸುದ್ದಿ

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ... ಮಗನನ್ನು ನೋಡಿದರೆ ಚಿರು ಕಾಣಿಸ್ತಾರೆ: ನಟಿ ಮೇಘನಾ ರಾಜ್

ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ. 

ಬೆಂಗಳೂರು: ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ. 

ಮಗುವಿನ ತೊಟ್ಟಿಲ ಶಾಸ್ತ್ರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ದಿನಗಳ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮೇಘನಾ ರಾಜ್ ಅವರು, ಈ ಸಮಯದಲ್ಲಿ ಕಷ್ಟದ ಸಮಯವನ್ನು ಹೇಗೆ ಎದುರಿಸಬೇಕೆಂಬುದನ್ನು ನಾನು ಚಿರುವಿನಿಂದ ಕಲಿತೆ. ಚಿರು ಅಂದ್ರೆ ನನ್ನ ಹ್ಯಾಪಿನೆಸ್. ಮಗನ ಆಗಮನ ಡಬಲ್ ಸಂಭ್ರಮ ಬಂದಿದೆ ಎಂದು ಹೇಳಿದ್ದಾರೆ. 

ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷವನ್ನು ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ. ತೊಟ್ಟಿಲು ತವರು ಮನೆಯಿಂದ ಬಂದಿದೆ. ಜನರು ನನ್ನನ್ನು, ಚಿರು ಹಾಗೂ ನಮ್ಮ ಕುಟುಂಬವನ್ನು ಮನೆಯವರಂತೆಯೇ ನೋಡಿಕೊಂಡಿದ್ದಾರೆ. ಇದೀಗ ನಾನು ಸ್ಟ್ರಾಂಗ್ ಇದ್ದೀನೋ, ಇಲ್ಲವೋ ಗೊತ್ತಿಲ್ಲ. ಆದರೆ, ಎಲ್ಲರೂ ಸ್ಟ್ರಾಂಗ್ ಆಗಿದ್ದೀನಿ ಎಂದು ಹೇಳುತ್ತಿದ್ದಾರೆ. ಆದರೆ, ನನಗೆ ನನ್ನ ಮಗನೇ ಶಕ್ತಿ. ಇದೆಲ್ಲವನ್ನೂ ಚಿರು ನನ್ನ ಕೈಯಲ್ಲಿ ಮಾಡಿಸುತ್ತಿದ್ದಾರೆ. ಮಗನನ್ನು ನೋಡಿದವರೆಲ್ಲೂ ಚಿರು ಜೆರಾಕ್ಸ್ ಎಂದೇ ಹೇಳುತ್ತಿದ್ದಾರೆಂದು ಖುಷಿಪಟ್ಟಿದ್ದಾರೆ. 

ಶೀಘ್ರದಲ್ಲೇ ಮಗುವಿನ ನಾಮಕರಣವನ್ನು ನೆರವೇರಿಸಲಾಗುತ್ತದೆ. ಒಳ್ಳೆಯ ಸಮಯವನ್ನು ನೋಡಿ ಮಾಡಲಾಗುತ್ತದೆ. ಹೆಸರನ್ನು ಇನ್ನೂ ನಿರ್ಧಾರ ಮಾಡಿಲ್ಲ. ಕೆಲ ಅಕ್ಷರಗಳು ಬಂದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಚಿರು ಮಗನಾಗಿರುವ ಕಾರಣ ವಿಶೇಷವಾದ ಹೆಸರಿಗಾಗಿ ಹುಡುಕುತ್ತಿದ್ದೇವೆಂದು ತಿಳಿಸಿದ್ದಾರೆ. 

ಜೂನಿಯರ್ ಚಿರುವಿನ ತೊಟ್ಟಿಲು ಶಾಸ್ತ್ರವನ್ನು ಇಂದು ನೆರವೇರಿಸಲಾಗಿದೆ. ಜೆ.ಪಿ. ನಗರದ ಮೇಘನಾ ರಾಜ್​ರ ಮನೆಯಲ್ಲಿ ತೊಟ್ಟಿಲು ಶಾಸ್ತ್ರ ನಡೆದಿದ್ದು, ಕೇವಲ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸರಳವಾಗಿ ನಡೆಸಲಾಗಿದೆ. ತೊಟ್ಟಿಲು ಶಾಸ್ತ್ರಕ್ಕೆ ಮೇಘನಾ ಮನೆಗೆ ಚಿರಂಜೀವಿ ಸರ್ಜಾರ ಅಜ್ಜಿ ಲಕ್ಷ್ಮೀ ದೇವಮ್ಮ ಹಾಗೂ ತಾಯಿ ಅಮ್ಮಾಜಿ ಕೂಡ ಆಗಮಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT