ಮೇಘಾ ಶೆಟ್ಟಿ 
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

ಬೆಂಗಳೂರು: ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

ಮೋನಿಕಾ ಕಲ್ಲೂರಿ ಆರ್ಟ್ಸ್​ ಪ್ರೊಡಕ್ಷನ್​ ಬ್ಯಾನರ್​ನಲ್ಲಿ ಇದೀಗ ಆಲ್ಬಂ ಸಾಂಗ್​ವೊಂದು ಸಿದ್ಧವಾಗುತ್ತಿದೆ. ‘ನೋಡು ಶಿವ..’ ಶೀರ್ಷಿಕೆಯ ಈ ಹಾಡಿಗೆ ಚಂದನ್ ಶೆಟ್ಟಿ ಸಂಗೀತ ನೀಡಿ ಅವರೇ ಹಾಡನ್ನೂ ಹಾಡಿದ್ದಾರೆ.

ಸುಮೀತ್ ಎಂ.ಕೆ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಪರಿಕಲ್ಪನೆ ಮತ್ತು ನಿರ್ದೇಶನ ಮಾಡುವುದರ ಜತೆಗೆ ಹಾಡಿನಲ್ಲಿಯೂ ಲೀಡ್ ಆಗಿ ಕಾಣಿಸಿಕೊಳ್ಳಲಿದ್ದು, ಅವರೊಡನೆ ಮೇಘಾ ಶೆಟ್ಟಿ ಗ್ಲಾಮರಸ್​​ ಆಗಿ ಹೆಜ್ಜೆ ಹಾಕಲಿದ್ದಾರೆ. ಸ್ಪೇಷಲ್ ಅಪೀಯರೆನ್ಸ್ ಆಗಿ ಚಂದನ್ ಶೆಟ್ಟಿ ಸಹ ಇರಲಿದ್ದಾರೆ.

ಎಎಂಸಿ ಸಿಟಿ ಗ್ರೂಪ್​ ಆಫ್​ ಇನ್ಸಿಟ್ಯೂಷನ್ ಸೇರಿ ಒಟ್ಟು 9 ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ಮತ್ತು ಆ ಸಂಸ್ಥೆಗಳ ವೈಸ್ ಪ್ರೆಸೆಡೆಂಟ್ ಆಗಿರುವ ಮೋನಿಕಾ ಕಲ್ಲೂರಿ, ಈ ಆಲ್ಬಂ ಹಾಡಿನ ಮೂಲಕ ಸ್ಯಾಂಡಲ್​ವುಡ್​ಗೆ ಆಗಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಾಟಾ ಸಮೂಹದಲ್ಲಿ ಬಿಕ್ಕಟ್ಟು: ಭಾರತೀಯ ಉದ್ಯಮಗಳು ನಿಮ್ಮ ಆಟದ ವಸ್ತುಗಳಲ್ಲ; ಪ್ರಧಾನಿ ಮೋದಿ-ಅಮಿತಾ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

'ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಗೆ ನಟಿಯರ ಮೈ ಬಣ್ಣದ ಗೀಳು; ಬಾಲಿವುಡ್‌ಗೆ ವಿದೇಶಿಯರೇ ಬೇಕು'!

MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ!

ಆಂಧ್ರ ಪ್ರದೇಶದ ನರ್ಸಾಪುರ ಬಳಿ ಕರಾವಳಿ ದಾಟಿದ 'ಅರ್ನಬ್' ಚಂಡಮಾರುತ; ತೀವ್ರತೆ ಇಳಿಕೆ, ಇಬ್ಬರು ಸಾವು

ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಬಲಿಯಾಯ್ತಾ ಚೀತಾ ಮರಿ?