ನಿರೂಪಕಿ ಅನುಶ್ರೀ, ಪ್ರಶಾಂತ್ ಸಂಬರಗಿ 
ಸಿನಿಮಾ ಸುದ್ದಿ

ಡ್ರಗ್ಸ್ ದಂಧೆ: ಅನುಶ್ರೀ ಬಂಧನವಾಗದಂತೆ ತಡೆಯುತ್ತಿರುವವರು ಯಾರು ಗೊತ್ತಾ! ಪ್ರಶಾಂತ್ ಸಂಬರಗಿ ಏನಂತಾರೆ?

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಷುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಷುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದಾರೆ.

ಇಲ್ಲಿಯವರೆಗೂ ಅನುಶ್ರೀ ಬಂಧನವಾಗದಂತೆ ಷುಗರ್ ಡ್ಯಾಡಿಯೊಬ್ಬರು ತಡೆಯುತ್ತಿದ್ದಾರೆ. ಇನ್ನು ಮುಂದೆ ಅದು ಸಾಧ್ಯವಾಗುವುದಿಲ್ಲ, ಆಕೆಯ ತಪ್ಪಿಗೆ ಶಿಕ್ಷೆಯಾಗುವುದು ನಿಶ್ಚಿತ. ಅನುಶ್ರೀಯ ಮತ್ತಷ್ಟು ರಹಸ್ಯಗಳು ಬಯಲಾಗುವುದು ಖಚಿತ ಎಂದು ಅವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಡ್ರಗ್ಸ್ ಪೆಡ್ಲರ್ ಜೊತೆಗೆ ಅನುಶ್ರೀ ಇರುವ ಫೋಟೋವೊಂದನ್ನು ಸಂಬರಗಿ ಹಂಚಿಕೊಂಡಿದ್ದಾರೆ.

ಇಂದು ಬೆಳಗ್ಗೆ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದ ಅನುಶ್ರೀ, ಸಿಸಿಬಿಯಿಂದ ನೊಟೀಸ್ ಬಂದಿದ್ದು ನೋವಾಗಿಲ್ಲ, ನಂತರ ನನ್ನನ್ನು ಬಿಂಬಿಸಿದ ರೀತಿ ಬೇಸರ ತಂದಿದೆ ಎಂದು ಕಣ್ಣೀರು ಇಟ್ಟಿದ್ದರು. ಇದರ ಬೆನ್ನಲ್ಲೇ, ಪ್ರಶಾಂತ್ ಸಂಬರಗಿ ಮಾಡಿರುವ ಟ್ವೀಟ್  ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel