ಸಿನಿಮಾ ಸುದ್ದಿ

ಸೀಮಂತದ ನಂತರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಕೊಟ್ಟ ಮೇಘನಾ ರಾಜ್

ಮೊನ್ನೆ ಮೊನ್ನೆಯಷ್ಟೇ ಸೀಮಂತ ಆಚರಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ಸೀಮಂತ ಆಚರಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಲಾಕ್ ಡೌನ್ ಘೋಷಣೆಗೆ ಮುನ್ನ ತೆರೆ ಕಂಡಿದ್ದ ಪತಿ ಚಿರಂಜೀವಿಯವರ ಚಿತ್ರ "ಶಿವಾರ್ಜುನ" ಇದೇ ಅಕ್ಟೋಬರ್ 16ಕ್ಕೆ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಈ ಬಗ್ಗೆ ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದು "ಚಿರು ಮತ್ತೊಮ್ಮೆ ಉದಯಿಸುತ್ತಿದ್ದಾರೆ. ಅದಕ್ಕೆ ಕಾರಣವೆಂದರೆ ಅಕ್ಟೋಬರ್ 16ರಂದು ಅವರ ನಟನೆಯ "ಶಿವಾರ್ಜುನ" ಚಿತ್ರ ಮತ್ತೊಮ್ಮೆ ಬಿಡುಗಡೆಯಾಗುತ್ತಿದೆ. " ಎಂದು ಬರೆದಿದ್ದಾರೆ. ಜತೆಗೆ ಚಿತ್ರದ ಪೋಸ್ಟರ್ ಸಹ ಪ ಲೋಡ್ ಮಾಡಿದ್ದಾರೆ.

ಅಕ್ಟೋಬರ್ 17ರಂದು  ಚಿರಂಜೀವಿ ಸರ್ಜಾ ಅವರ ಬರ್ತಡೇ ಆಗಿದ್ದು ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಕಡೆಯ ಚಿತ್ರವನ್ನು ಮತ್ತೊಮ್ಮೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಶಿವತೇಜಸ್ ನಿರ್ದೇಶನದ ಈ ಚಿತ್ರಕ್ಕೆ ಶಿವಾರ್ಜುನ್ ಬಂಡವಾಳ ತೊಡಗಿಸಿದ್ದರು. ಕಿಶೋರ್, ಸಾಧುಕೋಕಿಲಾ, ನಯನಾ, ಕುರಿ ಪ್ರತಾಪ್ ಮೊದಲಾದ ನಟ ನಟಿಯರು ಪ್ರಮುಖ ತಾರಾಂಗಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್