ಧನ್ವೀರ್ 
ಸಿನಿಮಾ ಸುದ್ದಿ

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್

ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.

ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ತಮ್ಮ ಮೇಲೆ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಧನ್ವೀರ್ ಅವರು, ಅರಣ್ಯ ಇಲಾಖೆಯ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 

ನಾನು ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ. ಅರಣ್ಯ ಇಲಾಖೆಯ ವಾಹನದಲ್ಲಿಯೇ ಸಫಾರಿಗೆ ಟಿಕೆಟ್ ಪಡೆದು ತೆರಳಿದ್ದೆ. ನೈಟ್ ಸಫಾರಿ ಮಾಡಿಲ್ಲ. ತಪ್ಪಾಗಿ ನೈಟ್ ಸಫಾರಿ ಎಂದು ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಫಾರಿ ವೇಳೆ ಧನ್ವೀರ್ ತೆಗೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ಧನ್ವೀರ್ ನೀಡಿರುವ ಫೋಟೋಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಧನ್ವೀರ್ ಅವರು ನೀಡಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಕ್ಷ್ಯಾಧಾರಗಳೆಂದು ಪರಿಗಣಿಸಲು ಸಾಧ್ಯವಿಲ್ಲ. ಧನ್ವೀರ್ ಅವರು ಸಫಾರಿಗೆ ತೆರಳಿದ ಸಮಯವನ್ನು ಪರಿಶೀಲಿಸಲಾಗುತ್ತದೆ. ಧನ್ವೀರ್ ಜೊತೆಗೆ ಸಫಾರಿಗೆ ತೆರಳಿದ್ದವರನ್ನು ವಿಚಾರಣೆಗೊಳಪಡಿಸಲಾಗುತ್ತದೆ. ತನಿಖೆ ಪೂರ್ಣಗೊಂಡ ಬಳಿಕ  ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ