ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ಪಾಸಿಟಿವ್!

ಸ್ಯಾಂಡಲ್'ವುಡ್ ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ಗುರುವಾರ ತಿಳಿದುಬಂದಿದೆ.

ಶರ್ಮಿಳಾ ಮಾಂಡ್ರೆ
Manjula VN
Updated On : 3 Sept 2020, 11:09 am

ಬೆಂಗಳೂರು: ಸ್ಯಾಂಡಲ್'ವುಡ್ ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ಗುರುವಾರ ತಿಳಿದುಬಂದಿದೆ. 

ಈ ಕುರಿತು ಸ್ವತಃ ನಟಿ ಶರ್ಮಿಳಾ ಮಾಂಡ್ರೆಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ಹಾಗೂ ಫೇಸ್'ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. 

ನಾನು ಮತ್ತು ನನ್ನ ಕುಟುಂಬದವರಿಗೆ ಕೋವಿಡ್‌-19 ಲಕ್ಷಣಗಳು ಕಂಡುಬಂದಿದ್ದು, ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ವೈರಸ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಐಸೋಲೇಷನ್ ನಲ್ಲಿರುವ ಆಯ್ಕೆ ಮಾಡಿಕೊಂಡಿದ್ದೇವೆ. ನಾನು ಕೂಡ ಕ್ವಾರಂಟೈನ್‌ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ' ಎಂದು ಅವರು ತಿಳಿಸಿದ್ದಾರೆ. 

Advertisement

Advertisement

ಶರ್ಮಿಳಾ ಅವರು ಈ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆಯೇ ಅವರ ಅಭಿಮಾನಿಗಳು ಶೀಘ್ರಗತಿಯಲ್ಲಿ ಗುಣಮುಖ ಆಗಲಿ ಎಂದು ಹಾರೈಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement