ಡ್ರಗ್ಸ್ ಜಾಲದ ದಂಧೆ, ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದಾರೆ.
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದಾರೆ.
ಅಪರಾಧ ಒಳಸಂಚು ಅಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ 21, 21ಸಿ, 27ಎ, 27ಬಿ,29 ಐಪಿಸಿ 120ಬಿ ಅಡಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ. ಒಟ್ಟು 12 ಜನ ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಿವಪ್ರಕಾಶ್ ಎ1, ರಾಗಿಣಿ ದ್ವಿವೇದಿ ಎ2, ವೀರೇನ್ ಖನ್ನಾ ಎ 3,ಪ್ರಶಾಂತ್ ರಂಕಾ ಎ4,ವೈಭವ್ ಜೈನ್ ಎ5, ಆದಿತ್ಯ ಆಳ್ವಾ ಎ6, ಲೂಮ್ ಪೆಪ್ಪರ್ ಎ7, ಪ್ರಶಾತ್ ರಿಜು ಎ8,ಅಶ್ವಿನ್ ಎ9,ಅಭಿ ಸ್ವಾಮಿ ಎ10, ರಾಹುಲ್ ಎ11, ವಿನಯ್ ಎ12 ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.