ರಾಗಿಣಿ ದ್ವಿವೇದಿ 
ಸಿನಿಮಾ ಸುದ್ದಿ

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನಟಿ ರಾಗಿಣಿ!

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. 

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ರಾಗಿಣಿ ಅವರ ಮೂರು ದಿನದ ಕಸ್ಟಡಿ ಕಾಲ ಮುಗಿದ ಹಿನ್ನೆಲೆಯಲ್ಲಿ ಇಂದು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ಕೋರ್ಟ್ ನ್ಯಾಯಧೀಶರಾದ ಜಗದೀಶ್ ಅವರು ಹಾಜರುಪಡಿಸಿದರು. 

ಈ ವೇಳೆ ಸಿಸಿಬಿ ಅಧಿಕಾರಿಗಳು ನ್ಯಾಯಾಧೀಶರಿಗೆ 10 ಕಾಲ ಸಿಸಿಬಿ ಕಸ್ಟಡಿ ವಿಸ್ತರಿಸುವಂತೆ ಕೋರ್ಟ್ ಗೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 5 ದಿನಕ್ಕೆ ಮಾತ್ರ ಕಸ್ಟಡಿಗೆ ಆದೇಶಿಸಿದ್ದಾರೆ.

ಡ್ರಗ್ಸ್ ಸೇವನೆ ಮತ್ತು ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿತ್ತು.

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಗಿಣಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಟಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video