ಸಿಸಿಬಿ ಪೊಲೀಸರು ನಟಿ ರಾಗಿಣಿಯವರನ್ನು ವಶಕ್ಕೆ ಪಡೆದ ಸಂದರ್ಭದ ಚಿತ್ರ 
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ನ್ಯಾಯಾಂಗ ಬಂಧನ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ಕೋರ್ಟ್ 14 ದಿನ ನ್ಯಾಯಾಂದ ಬಂಧನಕ್ಕೆ ಆದೇಶಿಸಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ಕೋರ್ಟ್ 14 ದಿನ ನ್ಯಾಯಾಂದ ಬಂಧನಕ್ಕೆ ಆದೇಶಿಸಿದೆ.

ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರು ನಟಿ ಹಾಗೂ ಇತರೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಬಂಧಿತ ನಟಿ ಸೇರಿದಂತೆ ಐವರಿಗೆ ಸೆಪ್ಟೆಂಬರ್ 27ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಸಿಸಿಬಿ ಪೊಲೀಸರು ನಟಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಇದರೊಂದಿಗೆ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ ಸ್ಯಾಂಡಲ್ ವುಡ್‍ ನ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರರಾಗಿದ್ದಾರೆ.

ಈ ಮಧ್ಯೆ, ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆಯಾಗಿದೆ. ಇದೇ ವೇಳೆ ಡ್ರಗ್ ಪೆಡ್ಲರ್ ರಾಹುಲು, ಶಿವಪ್ರಕಾಶ್, ವಿನಯ್ ಕುಮಾರ್‍, ವೈಭವ್ ಜೈನ್ ಅವರ ಜಾಮೀನು ವಿಚಾರಣೆಯನ್ನೂ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT