ತಲೆಮರೆಸಿಕೊಂಡಿಲ್ಲ, ನಾಳೆ ವಿಚಾರಣೆಗೆ ಹಾಜರಾಗ್ತೀವಿ: ಐಂದ್ರಿತಾ ಟ್ವೀಟ್
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ದಂಪತಿ ಇರಲಿಲ್ಲವಾದ ಕಾರಣ ಹಾಗೂ ದೂರವಾಣಿ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸ್ಟಾರ್ ದಂಪತಿ ಪರಾರಿಯಾಗಿದ್ದಾರೆಯೇ? ತಲೆಮರೆಸಿಕೊಂಡಿದ್ದಾರೆಯೇ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು.
ಈ ಬಗ್ಗೆ ಸ್ವತಃ ನಟಿ ಐಂದ್ರಿತಾ ಹಾಗೂ ದಿಗಂತ್ ಸ್ಪಷ್ಟನೆ ನೀಡಿದ್ದು, 'ಸಿಸಿಬಿಯಿಂದ ದೂರವಾಣಿ ಮೂಲಕ ನಮಗೆ ನೋಟಿಸ್ ಬಂದಿದೆ. ನಾಳೆ (ಸೆ.16) ಬೆಳಗ್ಗೆ 11 ಗಂಟೆಗೆ ವಿಚಾರಣೆ ಇದೆ. ನಾವು ಅಲ್ಲಿಗೆ ಹಾಜರಾಗಿ ಸಿಸಿಬಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ' ಎಂದು ಟ್ವೀಟ್ ಮಾಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಶೇಕ್ ಫಾಝಿಲ್ ಹೆಸರು ಮುಖ್ಯವಾಗಿ ಕೇಳಿಬಂದಿದೆ. ಇನ್ನು ಪ್ರಕರಣ ಬೆಳಕಿಗೆ ಬಂದ ನಂತರ ಫಾಝಿಲ್ ತಲೆ ಮರೆಸಿಕೊಂಡಿದ್ದಾನೆ. ಆದರೆ ಫಾಝಿಲ್ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಇದೀಗ ನಟಿ ಐಂದ್ರಿತಾ ರೇ ಮತ್ತು ದಿಗಂತ್ ಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.