ಸಿನಿಮಾ ಸುದ್ದಿ

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ, ಕೊನೆಯುಸಿರಿರುವವರೆಗೂ ಕನ್ನಡ ಪರ ನಿಲ್ಲುತೇವೆ: ದರ್ಶನ್

Shilpa D

ಬೆಂಗಳೂರು: ಕನ್ನಡದ ಹಲವಾರು ಕಲಾವಿದರು ಈಗಾಗಲೇ ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ 'ಚಾಲೆಂಜಿಂಗ್ ಸ್ಟಾರ್‌' ದರ್ಶನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಸಂಬಂಧ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ದರ್ಶನ್, 'ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ.

ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ 'ಹಿಂದಿ ದಿವಸ್' ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು' ಎಂದು 'ಡಿ ಬಾಸ್' ದರ್ಶನ್ ಖಡಕ್ ಆಗಿಯೇ ಹೇಳಿಕೆ ನೀಡಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ' ಎಂದು ಹೇಳಿದ್ದಾರೆ.
 

SCROLL FOR NEXT