ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ನಟಿ ರಾಗಿಣಿ, ಸಂಜನಾಗೆ ಇನ್ನು 3 ದಿನ ಜೈಲು ಫಿಕ್ಸ್!

ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.

ರಾಗಿಣಿ-ಸಂಜನಾ
Vishwanath S
Updated On : 21 Sept 2020, 6:07 pm

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.

ರಾಗಿಣಿ ಮತ್ತು ಸಂಜನಾರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಎನ್ ಡಿಪಿಎಸ್ ಕೋರ್ಟ್ ಮುಂದು ಹಾಜರುಪಡಿಸಲಾಗಿತ್ತು. ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದ್ದರಿಂದ ನಟಿಯರಿಬ್ಬರಿಗೂ ಇನ್ನು ಮೂರು ದಿನ ಜೈಲಿನಲ್ಲೇ ಕಳೆಯಬೇಕಾಗುತ್ತದೆ.

ರಾಗಿಣಿ ಜಾಮೀನು ಅರ್ಜಿಗೆ ಸರ್ಕಾರದ ಪರ ಅಭಿಯೋಜಕರು ಆಕ್ಷೇಪ ವ್ಯಕ್ತಪಡಿಸಿ, ಕಳೆದ 5 ವರ್ಷಗಳಿಂದ ಆಕೆಗೆ ಹಲವರ ಪರಿಚಯವಿದ್ದು, ಜಾಮೀನು ಪಡೆದು ಹೊರಬಂದಲ್ಲಿ ಅವರನ್ನೆಲ್ಲ ಎಚ್ಚರಿಸುವ ಸಾಧ್ಯತೆಯಿದೆ ಎಂದು ವಾದ ಮಂಡಿಸಿದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement