ಪಾರುಲ್ ಯಾದವ್ 
ಸಿನಿಮಾ ಸುದ್ದಿ

ರಿಯಾ, ರಾಗಿಣಿ, ಸಂಜನಾ ತಪ್ಪಿತಸ್ಥರೆಂದು ಸಾಬೀತಾಗುವವರೆಗೂ ಅಮಾಯಕರು: ನಟಿ ಪಾರುಲ್ ಯಾದವ್

ಚಿತ್ರಗಳಲ್ಲಿ ಕಾಣಿಸಿಕೊಳ್ಳುವುದು ವಿರಳವಾಗಿದ್ದರೂ, ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಪ್ಯಾರ್ ಗೆ ಆಗ್ಬಿಟೈತಿ ಹಾಡು ಖ್ಯಾತಿಯ ನಟಿ ಪಾರುಲ್ ಯಾದವ್, ಇತ್ತೀಚೆಗೆ ಕೆಲ ಹೇಳಿಕೆಗಳನ್ನು ನೀಡುವ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ.

ಬೆಂಗಳೂರು: ಚಿತ್ರಗಳಲ್ಲಿ ಕಾಣಿಸಿಕೊಳ್ಳುವುದು ವಿರಳವಾಗಿದ್ದರೂ, ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಪ್ಯಾರ್ ಗೆ ಆಗ್ಬಿಟೈತಿ ಹಾಡು ಖ್ಯಾತಿಯ ನಟಿ ಪಾರುಲ್ ಯಾದವ್, ಇತ್ತೀಚೆಗೆ ಕೆಲ ಹೇಳಿಕೆಗಳನ್ನು ನೀಡುವ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಆದ ಕೆಲ ವಿಚಾರಗಳನ್ನು ಯಾವುದೇ ಮುಲ್ಲಾಜಿಲ್ಲದೇ ಖಡಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವೊಂದನ್ನು ಹಂಚಿಕೊಂಡಿದ್ದಾರೆ.

ಮಾದಕ ವಸ್ತು ಸೇವನೆ ಎಂಬುದು ಗಂಭೀರ ಸಮಸ್ಯೆ ಎಂಬುದು ನನಗೆ ಗೊತ್ತು. ಈ ಪಿಡುಗನ್ನು ಬುಡ ಸಮೇತ ಕಿತ್ತುಹಾಕುವ ಎಲ್ಲಾ ರೀತಿಯ ಪ್ರಯತ್ನವೂ ನಡೆಯಬೇಕು. ಅಲ್ಲದೇ, ಈ ಮಾದಕ ಸೇವನೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ, ದೇಶದ ಅತ್ಯುನ್ನತ ತನಿಖಾ ಸಂಸ್ಥೆಗಳು ತಮ್ಮ ಸಾಮರ್ಥ್ಯವನ್ನು ಈ ಮೂವರು ಮಹಿಳೆಯರ ಮೇಲೆ ಕೇಂದ್ರೀಕರಿಸುತ್ತಿರುವುದರಲ್ಲಿ ಹೆಚ್ಚು ಅರ್ಥವಿದೆ ಎಂದು‌ ನನಗನಿಸುತ್ತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೊರೊನಾ ವೈರಸ್‌ ನಿಯಂತ್ರಿಸುವಲ್ಲಿ ವಿಫಲ ಆಗಿದೆ. ಆರ್ಥಿಕತೆ ಹಳ್ಳ ಹಿಡಿದಿದೆ. ಅತ್ತ, ಚೀನಾದಿಂದ ಅಪಾಯ ಕೂಡ ಎದುರಾಗಿದೆ. ಈ ವಿಚಾರಗಳ ಮೇಲಿದ್ದ ಎಲ್ಲರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರಕ್ಕೆ ಇಂಥದ್ದೇನೋ ಬೇಕಾಗಿತ್ತು ಎಂದೆನಿಸುತ್ತದೆ' ಎಂದಿದ್ದಾರೆ ಪಾರುಲ್‌.

ರಾಗಿಣಿ ದ್ವಿವೇದಿ, ರಿಯಾ ಚಕ್ರವರ್ತಿ  ಮತ್ತು ಸಂಜನಾ ಗಲ್ರಾನಿಗೆ ಸಂಬಂಧಿಸಿದ ಕೆಲವು ಖಾಸಗಿ ವಿಡಿಯೋ ಮತ್ತು ಮಾಹಿತಿಯನ್ನು ಪೊಲೀಸರು ಲೀಕ್‌ ಮಾಡುತ್ತಿರುವುದು ಅಹಸ್ಯದ ಸಂಗತಿ. ತಪ್ಪು ಸಾಬೀತು ಆಗುವವರೆಗೂ ಅವರು ನಿರಪರಾಧಿಗಳು ಮತ್ತು ಅಮಾಯಕರು. ತನಿಖೆಯ ವಿಡಿಯೋಗಳು ಹರಿದಾಡುತ್ತಿರುವುದನ್ನು ನೋಡಲು ತುಂಬ ನೋವಾಗುತ್ತದೆ. ಪೊಲೀಸರು ಜನರಿಗಾಗಿ ಕೆಲಸ ಮಾಡುತ್ತಿದ್ದಾರಾ ಅಥವಾ ನ್ಯೂಸ್‌ ಚಾನೆಲ್‌ಗಳಿಗಾಗಿ ಕೆಲಸ ಮಾಡುತ್ತಿದ್ದಾರಾ? ಎಂದು ನಟಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT